ಸೋಮವಾರ – ದ.ಕ 270 , ಉಡುಪಿ 83 ಹಾಗೂ ರಾಜ್ಯದಲ್ಲಿ 6495 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಸೋಮವಾರ) ದ.ಕ ಜಿಲ್ಲೆಯಲ್ಲಿ 270 , ಉಡುಪಿ 83 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 270 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12443 ಕ್ಕೆ ಏರಿಕೆಯಾಗಿದೆ.ಇಂದು 12 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 368 ಕ್ಕೆ ಏರಿಕೆಯಾಗಿದೆ. ಇಂದು 367 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2556 ಸಕ್ರಿಯ ಪ್ರಕರಣಗಳಿವೆ. 270 ಪ್ರಕರಣಗಳ ಪೈಕಿ 117 ಪ್ರಕರಣಗಳು ಮಂಗಳೂರಿನಿಂದ, 90 ಪ್ರಕರಣಗಳು ಬಂಟ್ವಾಳದಿಂದ, 24 ಪ್ರಕರಣಗಳು ಪುತ್ತೂರಿನಿಂದ, 14 ಪ್ರಕರಣಗಳು ಸುಳ್ಯದಿಂದ , 14 ಪ್ರಕರಣಗಳು ಬೆಳ್ತಂಗಡಿಯಿಂದ ಹಾಗೂ 11 ಪ್ರಕರಣಗಳು ಬೇರೆ ಜಿಲ್ಲೆಯವರದ್ದಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 83 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 11596ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2398 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಇಂದು 6495 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,42,423ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಇಂದು 113 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,702ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಇಂದು 7,238 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ಒಟ್ಟು 2,49,467 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ಧಾರೆ. 87,235 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 103 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

Sponsors

Related Articles

Leave a Reply

Your email address will not be published. Required fields are marked *

Back to top button