ಸೋಮವಾರ – ದ.ಕ 8 ಹಾಗೂ ರಾಜ್ಯದಲ್ಲಿ 653 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಸೋಮವಾರ ) ದ.ಕ ಜಿಲ್ಲೆಯಲ್ಲಿ 8 ಹಾಗೂ ರಾಜ್ಯದಲ್ಲಿ 653 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 8 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 32783 ಕ್ಕೆ ಏರಿಕೆಯಾಗಿದೆ. ಇಂದು ಇಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ.ಇಂದು 37 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು 653 ಮಂದಿಗೆ ಕೊರೋನ ಪಾಸಿಟಿವ್ ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,16,909ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಎಂಟು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,070ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1178 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,92,273ಕ್ಕೆ ಏರಿಕೆಯಾಗಿದೆ. ಇನ್ನು 12,547 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 205 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button