ಕೊರೋನಾ – ಮೂಡುಬಿದಿರೆ ಶಿಕ್ಷಕಿ ನಿಧನ…

ಮೂಡುಬಿದಿರೆ: ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು ಮಕ್ಕಳ ಬಳಿಗೆ ಹೋಗುತ್ತಿದ್ದ ಶಿಕ್ಷಕಿ ಪದ್ಮಾಕ್ಷಿ ಕೊರೋನಾ ಸೋಂಕಿನಿಂದಾಗಿ ಇಂದು ಮೃತಪಟ್ಟಿದ್ದಾರೆ.
ಶಿಕ್ಷಕಿಗೆ ಸೆ. 29ರಂದು ಕೋವಿಡ್-19 ದೃಢಪಟ್ಟು, ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಶಿಕ್ಷಕಿಗೆ ಎರಡನೇ ಹಂತದ ಪರೀಕ್ಷೆಯಲ್ಲಿ ಕೋವಿಡ್ ನೆಗೆಟಿವ್ ಬಂದಿತ್ತು. ತಾಯಿಯ ಚಿಕಿತ್ಸೆಗೆ ಸಹಕರಿಸುವಂತೆ ಕೋರಿ ಪುತ್ರಿ ಐಶ್ವರ್ಯಾ ಫೇಸ್ ಬುಕ್ ನಲ್ಲಿ ಮಾಡಿಕೊಂಡ ಮನವಿಗೆ ಸ್ಪಂದಿಸಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿಕ್ಷಕಿ ಇಂದು ಸಾವನ್ನಪ್ಪಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button