ಸುದ್ದಿ

ಮೂಡುಬಿದರೆ – ರಾಷ್ಟ್ರೀಯ ಪೋಷಣ್ ಮಾಸಾಚರಣೆ…

ಮೂಡುಬಿದರೆ: ಸಮಾಜ ಮಂದಿರದಲ್ಲಿ ನಡೆದ ದ.ಕ.ಜಿ.ಪಂ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ, ಮೂಡುಬಿದಿರೆಯ ಸಮುದಾಯ ಆರೋಗ್ಯ ಕೇಂದ್ರ, ಪುರಸಭೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆ ವಲಯ ಮಟ್ಟದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ವಹಿಸಿದ್ದರು.
ಈ ಸಂದರ್ಭದಲ್ಲಿ ಮೂಡುಬಿದಿರೆ ತಾಲೂಕು ತಹಶೀಲ್ದಾರರಾದ ಸಚ್ಚಿದಾನಂದ, ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕಾರಗಿ, ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ಪೋಶಣ್ ಅಭಿಯಾನದ ಜಿಲ್ಲಾ ಸಂಯೋಜಕಿ ಬಬಿತಾ, ಕೆಎಂಸಿ ಆಸ್ಪತ್ರೆಯ ಡಾ. ರಮೇಶ್ ಹೊಳ್ಳ, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ದಯಾವತಿ, ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲ, ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಭಾರತಿ, ಆರೋಗ್ಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಗರ್ಭಿಣಿಯರು, ಪುಟಾಣಿ ಮಕ್ಕಳು ಹಾಗು ಹೆತ್ತವರು ಉಪಸ್ಥಿತರಿದ್ದರು.

Related Articles

Back to top button