Jannah Theme License is not validated, Go to the theme options page to validate the license, You need a single license for each domain name.
ಸುದ್ದಿ

ಜಾತ್ಯಾತೀತ ಜನತಾದಳ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಮಹಮ್ಮದ್ ಇಕ್ಬಾಲ್ ಎಲಿಮಲೆ ನೇಮಕ…

ಸುಳ್ಯ : ಕರ್ನಾಟಕ ಪ್ರದೇಶ ಜನತಾ ದಳ (ಜಾ) ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಐ.ಕೆ. ಮಹಮ್ಮದ್ ಇಕ್ಬಾಲ್ ಎಲಿಮಲೆ ಯವರನ್ನು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಅಧ್ಯಕ್ಷರಾದ ಸಿಎಂ ಇಬ್ರಾಹಿಂ ರವರು ನೇಮಕಗೊಳಿಸಿರುತ್ತಾರೆ.
ಇವರ ನೇಮಕಾತಿಗೆ ಮಾಜಿ ಮುಖ್ಯಮಂತ್ರಿಗಳಾದ ಎಚ್. ಡಿ. ಕುಮಾರಸ್ವಾಮಿ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಪಕ್ಷದ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ ರವರು ಶಿಫಾರಸು ಮಾಡಿದ್ದರು.
ತಾಲೂಕು ಬೋರ್ಡ್ ಸದಸ್ಯರಾಗಿದ್ದ ದಿವಂಗತ ಇಬ್ರಾಹಿಂ ಎಲಿಮಲೆ ಹಾಗೂ ಕತಿಜಮ್ಮರವರ ಪುತ್ರರಾಗಿರುವ ಇಕ್ಬಾಲ್ ಎಲೆಯವರು 2018 ರಿಂದ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
2003 ರಿಂದ 2018ರವರೆಗೆ ರಾಜ್ಯ ಯುವ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ, ಸುಳ್ಯ ತಾಲೂಕು ಯುವ ಜನತಾದಳದ ಅಧ್ಯಕ್ಷರಾಗಿ, ಪಿ .ಎ. ಸಿ. ಬ್ಯಾಂಕ್ ಗುತ್ತಿಗಾರು ಇದರ ನಿರ್ದೇಶಕರಾಗಿ, ಟಿ.ಎ.ಪಿ.ಸಿ.ಎಂ.ಎಸ್. ಸುಳ್ಯ ಇದರ ನಿರ್ದೇಶಕರಾಗಿ, ಅಲ್ಪಸಂಖ್ಯಾತರ ಸಹಕಾರಿ ಸಂಘದ ನಿರ್ದೇಶಕರಾಗಿ, ನುಸ್ರತ್ತುಲ್ ಇಸ್ಲಾಂ ಎಸೋಸಿಯೇಷನ್ ಅಧ್ಯಕ್ಷರಾಗಿ, ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ನಿರ್ದೇಶಕರಾಗಿ, ಸುಳ್ಯ ತಾಲೂಕು ಜಮಿಯತುಲ್ ಫಲಹ ಅಧ್ಯಕ್ಷರಾಗಿ, ದೇವಚಳ್ಳ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ, ಗ್ರಾಮ ಪಂಚಾಯತ್ ಸದಸ್ಯರ ಫೆಡರೇಶನ್ ರಾಜ್ಯ ಸಮಿತಿ ಸದಸ್ಯರಾಗಿ, ಪ್ರಸ್ತುತ ಎಲಿಮಲೆ ಜುಮಾ ಮಸೀದಿಯ ಅಧ್ಯಕ್ಷರಾಗಿ, ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾಗಿ, ಸುಳ್ಯ ಅನ್ಸಾರಿಯ್ ಎಜುಕೇಶನ್ ಸೆಂಟರ್ ಸಲಹಾ ಸಮಿತಿ ಸದಸ್ಯರಾಗಿ, ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಹಮ್ಮದ್ ಇಕ್ಬಾಲ್ ಎಲಿಮಲೆ ಯವರನ್ನು ಕರ್ನಾಟಕ ಪ್ರದೇಶ ಜನತಾದಳ ಜಾತ್ಯಾತೀತ ಪಕ್ಷದ ನೂತನ ಸಮಿತಿಯ ರಾಜ್ಯ ಕಾರ್ಯದರ್ಶಿಯಾಗಿ ಪಕ್ಷದ ರಾಜ್ಯ ಅಧ್ಯಕ್ಷರಾದ ಸಿಎಂ ಇಬ್ರಾಹಿಂ ರವರು ಮರು ನೇಮಕಗೊಳಿಸಿರುತ್ತಾರೆ.

Related Articles

Back to top button