ಸುದ್ದಿ

ಬಂಟ್ವಾಳ – ರಾಷ್ಟ್ರೀಯ ಪೌಷ್ಟಿಕ ಸಪ್ತಾಹ ಕಾರ್ಯಕ್ರಮ…

ಬಂಟ್ವಾಳ: ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಹಾಗೂ ಸ್ತ್ರೀಶಕ್ತಿ ಒಕ್ಕೂಟಗಳ ಜಂಟಿ ಆಶ್ರಯದಲ್ಲಿ ಸ್ತ್ರೀಶಕ್ತಿ ಭವನದಲ್ಲಿ ರಾಷ್ಟ್ರೀಯ ಪೌಷ್ಟಿಕ ಸಪ್ತಾಹ ಕಾರ್ಯಕ್ರಮ ಸೆ. 7 ರಂದು ನಡೆಯಿತು.
ತಾಲೂಕು ಪಂಚಾಯತ್ ಅಧ್ಯಕ್ಷ ಅಬ್ಬಾಸ್ ಆಲಿ,ವಕೀಲರಾದ ಶೈಲಜಾ ಹಾಗೂ ಶ್ರೀಮತಿ ಆಶಾಮಣಿ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷರು ಶ್ರೀಮತಿ ಸುಧಾ, ಕಾರ್ಯದರ್ಶಿ ಶ್ರೀಮತಿ ಗೀತಾ ಜಯತೀರ್ಥ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಶ್ರೀಮತಿ ಅಶ್ವಿನಿ, ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ಗಟ್ರೂಡ್ ವೇಗಸ್ ಉಪಸ್ಥಿತರಿದ್ದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಬಾಯಿ ಹೆಚ್ ಸ್ವಾಗತಿಸಿ, ಪ್ರಸ್ತಾವನೆ ಮಾಡಿದರು. ಸಂಪನ್ಮೂಲ ವ್ಯಕ್ತಿ, ಮೇಲ್ವಿಚಾರಕಿ ಶ್ರೀಮತಿ ಸಿಂಧು ಆಹಾರ ಮತ್ತು ಆರೋಗ್ಯದ ಮಹತ್ವ ಮತ್ತು ಪೋಷಕಾಂಶದ ಕೊರತೆಯಿಂದ ಬರುವ ಕಾಯಿಲೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ನಂತರ ಪೌಷ್ಟಿಕ ಆಹಾರ ಪ್ರಾತ್ಯಕ್ಷತೆ ಹಾಗೂ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನವನ್ನು ನೀಡಲಾಯಿತು. ಶ್ರೀಮತಿ ಸರೋಜಭಟ್ ಇವರು ಧನ್ಯವಾದ ಸಲ್ಲಿಸಿದರು. ಲೀಲಾವತಿ ಕಾರ್ಯಕ್ರಮ ನಡೆಸಿಕೊಟ್ಟರು.

Related Articles

Leave a Reply

Your email address will not be published.

Back to top button