ಸುಳ್ಯದಲ್ಲಿ ಪ್ರೆಸ್ ಕ್ಲಬ್ ಕಟ್ಟಡಕ್ಕೆ ಶಿಲಾನ್ಯಾಸ – ಸಮಾಜದ ಬೆಳವಣಿಗೆಯಲ್ಲಿ ಮಾಧ್ಯಮಗಳ ಜವಾಬ್ದಾರಿ ಮಹತ್ತರ – ಸಚಿವ ಎಸ್.ಅಂಗಾರ…

ಸುಳ್ಯ: ಸಮಾಜದಲ್ಲಿ ಮಾಧ್ಯಮಗಳ ಜವಾಬ್ದಾರಿ ಮಹತ್ತರವಾಗಿದೆ. ಪ್ರತಿಯೊಂದು ಮಾಧ್ಯಮಗಳು ಕೂಡ ನಿಸ್ಪಕ್ಷವಾಗಿ ಮತ್ತು ಸ್ಪಷ್ಟವಾಗಿ ವರದಿ ಮಾಡಿದರೆ ಅಂತಹ ವರದಿಗಳಿಗೆ ಮಹತ್ವ ಬರುತ್ತದೆ. ಇಂತಹ ವರದಿಗಳು ಜನರ ವಿಶ್ವಾಸ ಗಳಿಸುತ್ತದೆ. ಜನಪರವಾದ ವರದಿಗಾರಿಕೆಯಿಂದ ಮಾಧ್ಯಮ ಕ್ಷೇತ್ರ ಇನ್ನಷ್ಟು ವಿಸ್ತಾರವಾಗಿ ಮತ್ತು ಪರಿಣಾಮಕಾರಿಯಾಗಿ ಬೆಳೆಯಲು ಸಾಧ್ಯ ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.
ಅವರು ಸುಳ್ಯ ತಾಲೂಕು ಪಂಚಾಯಿತಿ ವತಿಯಿಂದ ಕೊಡಮಾಡಿದ ಅಂಬೆಟಡ್ಕದ ನಿವೇಶನದಲ್ಲಿ ಶನಿವಾರ ನೂತನ ಪ್ರೆಸ್ ಕ್ಲಬ್ ಕಟ್ಟಡ ಮತ್ತು ಪತ್ರಕರ್ತರ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು. ನಿವೇಶನ ನೀಡಲು ಸಹಕರಿಸಿದ
ತಾ.ಪಂ.ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ವ್ಯವಸ್ಥಾಪಕ ಹರೀಶ್ ರಾವ್ ಅವರಿಗೆ ಕೃತಜ್ಞತೆ ಸಲ್ಲಿಸಿ ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಸುಳ್ಯ ನಗರ ಪಂಚಾಯಿತಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾ ಪ್ರಸಾದ್ ಕೆ.ವಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಇಂದಾಜೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ಗುತ್ತಿಗೆದಾರ ನಾರಾಯಣ ಕೇಕಡ್ಕ, ನ್ಯಾಯವಾದಿ ದಿನೇಶ್ ಮಡಪ್ಪಾಡಿ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಕೆ.ಪಿ. ಜಾನಿ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಕೃಷ್ಣ ಬೆಟ್ಟ, ಜರ್ನಲಿಸ್ಟ್ ಯೂನಿಯನ್ ತಾಲೂಕು ಅಧ್ಯಕ್ಷ ಉಮೇಶ್ ಮಣಿಕ್ಕಾರ, ನಾಗರಾಜ ಮೇಸ್ತ್ರಿ, ನ.ಪಂ. ಮಾಜಿ ಸದಸ್ಯ ಕೆ.ಎಂ. ಮುಸ್ತಫ, ದಿನೇಶ್ ಮಡಪ್ಪಾಡಿ ವೇದಿಕೆಯಲ್ಲಿದ್ದರು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ರಂಗಕರ್ಮಿ ಜೀವನ್ ರಾಂ ಸುಳ್ಯ, ಉಜ್ವಲ್ ಯು.ಜೆ., ಪ್ರಸನ್ಮ, ಬೂಡು ರಾಧಾಕೃಷ್ಣ ರೈ,ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ಶಂಕರ ಪೆರಾಜೆ, ಕೇಶವ ಸಿ.ಎ., ವೆಂಕಟ್ರಮಣ ಮುಳ್ಯ, ಆನಂದ ರಾವ್ ಕಾಂತಮಂಗಲ, ಮೊದಲಾದವರಿದ್ದರು. ಪುರೋಹಿತ ನಾಗರಾಜ್ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ, ಖಜಾಂಜಿ ಯಶ್ವಿತ್ ಕಾಳಮ್ಮನೆ ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ರೇಣುಕಾಪ್ರಸಾದ್ ರಿಂದ 50 ಸಾವಿರ ಚೆಕ್ ಹಸ್ತಾಂತರ…

ಪ್ರೆಸ್ ಕ್ಲಬ್ ಮತ್ತು ಪತ್ರಕರ್ತರ ಸಮುದಾಯ ಭವನ ನಿರ್ಮಾಣಕ್ಕೆ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಡಾ.ಕೆ.ವಿ.ರೇಣುಕಾ ಪ್ರಸಾದ್ ಅವರು 50 ಸಾವಿರ ರೂಗಳ ಚೆಕ್ ಹಸ್ತಾಂತರ ಮಾಡಿದರು. ಪತ್ರಕರ್ತರ ಭವನ ನಿರ್ಮಾಣಕ್ಕೆ ಪೂರ್ಣ ಸಹಕಾರ ನೀಡಲಾಗುವುದು. ಪ್ರಥಮ ಹಂತದಲ್ಲಿ 50 ಸಾವಿರ ರೂ ನೀಡುತ್ತಿದ್ದೇನೆ ಎಂದು ಡಾ.ರೇಣುಕಾಪ್ರಸಾದ್ ಹೇಳಿದರು.

Sponsors

Related Articles

Back to top button