ಸುದ್ದಿ

ರಾಜ್ಯದ ಎಲ್ಲಾ ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ – ಕೋಟ ಶ್ರೀನಿವಾಸ ಪೂಜಾರಿ…

ಸುಬ್ರಹ್ಮಣ್ಯ : ರಾಜ್ಯದ ಎಲ್ಲಾ ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ, ಯಾವುದೇ ಸೇವೆಗಳಿಗೆ ಅವಕಾಶವಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ಕಾರಣದಿಂದ ಬೇರೆ ದಾರಿ ಇಲ್ಲದೆ ಕೇವಲ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗುತ್ತದೆ. ಯಾವುದೇ ಸೇವೆಯನ್ನು ನೀಡಲು ಸದ್ಯ ಅವಕಾಶ ನೀಡಲಾಗದು ಎಂದಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿರುವ ಮಾಸ್ಟರ್ ಪ್ಲಾನ್ ಕಾಮಗಾರಿಯ ಒಳಚರಂಡಿ ವ್ಯವಸ್ಥೆ, ವಸತಿ ಗೃಹಗಳ ಕಾಮಗಾರಿ ವೀಕ್ಷಿಸಿ ವಿಳಂಬದ ಬಗ್ಗೆ ಅಧಿಕಾರಿಗಳೊಂದಿಗೆ ಅವರು ಚರ್ಚೆ ನಡೆಸಿದರು. ದೂರುಗಳು ಬಂದ ಕಾರಣ ತನಿಖೆ ನಡೆಸಿ ವರದಿ ನೀಡಲು ಮುಜರಾಯಿ ಇಲಾಖೆಯ ಕಮಿಷನರ್ ಅವರಿಗೆ ಸೂಚಿಸಲಾಗಿದೆ.ತನಿಖೆ ಆರಂಭವಾಗಿದ್ದು 1 ತಿಂಗಳಿನಲ್ಲಿ ವರದಿ ಲಭಿಸಲಿದೆ. ಕಾಲಗಾರಿಯಲ್ಲಿ ಯಾವುದೇ ಲೋಪವಾಗಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಕ್ಷೇತ್ರದ ಎಲ್ಲಾ ಆಸ್ತಿಗಳನ್ನು ಹದ್ದು ಬಸ್ತಿನಲ್ಲಿಡುವ ಕಾರ್ಯ ನಡೆಸಲಾಗುತ್ತಿದ್ದು, ದೇವಾಲಯದ ಆಡಳಿತಾತ್ಮಕ ವಿಷಯಗಳ ಮೇಲ್ಪಿಚಾರಣೆಗೆ ವಿಶೇಷ ಲೆಕ್ಕಪರಿಶೋಧಕರನ್ನು ನೇಮಕ ಮಾಡಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

Related Articles

Leave a Reply

Your email address will not be published.

Back to top button