ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಪಾವಂಜೆ ಮೇಳ….

ಮಂಗಳೂರು: ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರು ಪ್ರಧಾನ ಭಾಗವತರಾಗಿರುವ ಪಾವಂಜೆ ಮೇಳ ಈ ವರ್ಷದಿಂದ ಆರಂಭಗೊಳ್ಳಲಿದೆ.
ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಪಟ್ಲ ಸತೀಶ್ ಶೆಟ್ಟಿ ಮತ್ತು ಪಾವಂಜೆ ದೇವಳದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್, ನೂತನ ಮೇಳದ ಬಗ್ಗೆ ಮಾಹಿತಿ ನೀಡಿದರು.

ನ. 27ರಿಂದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ , ಪಾವಂಜೆಯ ಪ್ರದರ್ಶನ ಆರಂಭವಾಗಲಿದೆ. ಮೇಳದ ಯಕ್ಷಗಾನ ಪ್ರದರ್ಶನವು ಕಾಲಮಿತಿಯದ್ದಾಗಿದ್ದು, ಸಾಮಾನ್ಯವಾಗಿ ಸಂಜೆ 6 ಗಂಟೆಯಿಂದ 11ರವರೆಗಿನ ಅವಧಿಯಲ್ಲಿ ನಡೆಯಲಿದೆ. ಈ ಎಲ್ಲಾ ಪ್ರದರ್ಶನಗಳನ್ನು ಕೋವಿಡ್-19ರ ಪರಿಸ್ಥಿತಿಯಲ್ಲಿ ಸರಕಾರ ನೀಡುವ ನಿರ್ದೇಶನಗಳಿಗೆ ಒಳಪಟ್ಟು ನಡೆಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ಪಟ್ಲ ರೊಂದಿಗೆ ಪ್ರಫುಲ್ಲಚಂದ್ರ ನೆಲ್ಯಾಡಿ ಭಾಗವತಿಕೆಯಲ್ಲಿ ಸಾಥ್ ನೀಡಲಿದ್ದಾರೆ. ಹಿಮ್ಮೇಳದಲ್ಲಿ ಪದ್ಮನಾಭ ಉಪಾಧ್ಯಾಯ, ಗುರುಪ್ರಸಾದ್ ಬೊಳ್ಳಿಂಜಡ್ಕ, ಪ್ರಶಾಂತ್ ವಗೆನಾಡು, ಪೂರ್ಣೇಶ್ ಆಚಾರ್ಯ ಇರಲಿದ್ದಾರೆ. ಉಜಿರೆ ನಾರಾಯಣ, ಸಂದೇಶ್ ಮಂದಾರ ಹಾಸ್ಯ ಪಾತ್ರಧಾರಿಗಳು, ಅಕ್ಷಯ್ ಕುಮಾರ್, ರಾಜೇಶ್ ನಿಟ್ಟೆ, ಯೋಗೀಶ್ ಕಡಬ, ವಿಶ್ವಾಸ್ ಕಾವೂರು ಸ್ತ್ರೀ ಪಾತ್ರಧಾರಿಗಳು, ರಾಧಾಕೃಷ್ಣ ನಾವಡ, ದಿವಾಣ ಶಿವಶಂಕರ ಭಟ್, ಸಂತೋಷ್ ಮಾನ್ಯ, ರಾಕೇಶ್ ರೈ, ಸತೀಶ್ ನೈನಾಡು, ಮಾಧವ ಕೊಳ್ತಮಜಲು, ಮೋಹನ್ ಬೆಳ್ಳಿಪ್ಪಾಡಿ, ಮನೀಷ್ ಪಾಟಾಳಿ, ಲೋಕೇಶ ಮುಚ್ಚೂರು, ಹರಿರಾಜ್ ಕಿನ್ನಿಗೋಳಿ, ರೋಹಿತ್, ದಿವಾಕರ, ಲಕ್ಷಣ, ಮಧುರಾಜ್, ಭುವನ್ ಮೊದಲಾದ ಕಲಾವಿದರು ಮೇಳದಲ್ಲಿರಲಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button