ಸತತ 6ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ…

ನವದೆಹಲಿ: ಸತತ 6ನೇ ದಿನವೂ ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಲಾಗಿದ್ದು, ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆಯಾಗುತ್ತಿದೆ.

ಪೆಟ್ರೋಲ್ ದರದಲ್ಲಿ 57 ಪೈಸೆ ಹಾಗೂ ಡೀಸೆಲ್ ದರದಲ್ಲಿ 59 ಪೈಸೆ ಏರಿಕೆ ಮಾಡಲಾಗಿದ್ದು, ಇದರಿಂದಾಗಿ 6 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಕ್ರಮವಾಗಿ ರೂ.3.31 ಹಾಗೂ ರೂ.3.42 ಏರಿಕೆಯಾದಂತಾಗಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕಂಪನಿಗಳು ಈ ಹೆಚ್ಚಳ ಮಾಡುತ್ತಿವೆ ಎಂಬ ಸಮಜಾಯಿಷಿಕೆ ಕೇಳಿಬಂದಿದೆ.

Sponsors

Related Articles

Leave a Reply

Your email address will not be published. Required fields are marked *

Back to top button