ರಾಜ್ಯಸಭೆ ಚುನಾವಣೆ – ಬಿಜೆಪಿಯಿಂದ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರಿಗೆ ಟಿಕೆಟ್ ಘೋಷಣೆ…
ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಬಿಜೆಪಿ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಯವರಿಗೆ ಟಿಕೆಟ್ ನೀಡಿದೆ. ಈ ಮೂಲಕ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಪ್ರದೇಶಗಳಿಗೆ ಆದ್ಯತೆ ನೀಡಿದೆ.
ಬಳ್ಳಾರಿ ಬಿಜೆಪಿ ವಿಭಾಗದ ಪ್ರಬಾರಿ ಆಗಿರುವ ಅಶೋಕ್ ಗಸ್ತಿ, ಬೆಳಗಾವಿ ಬಿಜೆಪಿ ವಿಭಾಗದ ಪ್ರಭಾರಿ ಈರಣ್ಣ ಕಡಾಡಿ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಜೂನ್ 19 ರಂದು ನಡೆಯುವ ನಾಲ್ಕು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿದೆ.
ರಾಯಚೂರಿನವರಾದ ಅಶೋಕ್ ಗಸ್ತಿ ಸವಿತಾ ಸಮಾಜಕ್ಕೆ ಸೇರಿದವರು. ಹಾಗೂ ಬೆಳಗಾವಿಯವರಾದ ಈರಣ್ಣ ಕಡಾಡಿ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇವರಿಬ್ಬರು ಉತ್ತರ ಕರ್ನಾಟಕಕ್ಕೆ ಸೇರಿದವರು.
ರಾಜ್ಯ ಸಭೆ ಚುನಾವಣೆ ಟಿಕೆಟ್ ನ ಪ್ರಬಲ ಆಕಾಂಕ್ಷಿಗಳಾಗಿದ್ದ ಹಾಲಿ ಸದಸ್ಯ ಪ್ರಭಾಕರ ಕೋರೆ ಮತ್ತು ರಮೇಶ್ ಕತ್ತಿ ಮತ್ತು ಪ್ರಕಾಶ್ ಶೆಟ್ಟಿ ಅವರಿಗೆ ಟಿಕೆಟ್ ಕೈತಪ್ಪಿದೆ. ವಿಧಾನಸಭೆಯಲ್ಲಿ 117 ಶಾಸಕರ ಬಲ ಹೊಂದಿರುವ ಬಿಜೆಪಿ 2 ಸ್ಥಾನದಲ್ಲಿ ಸುಲಭವಾಗಿ ಜಯಗಳಿಸಲಿದೆ.