ಸುದ್ದಿ

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ…

ಹೊಸದಿಲ್ಲಿ : ದೆಹಲಿ ಆಸ್ಪತ್ರೆಯಲ್ಲಿ ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ (74) ಅವರು ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ.

ಲೋಕ ಜನಶಕ್ತಿ ಪಾರ್ಟಿ(ಎಲ್‌ಜೆಪಿ) ಸಂಸ್ಥಾಪಕ, ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರು 5 ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. 8 ಬಾರಿ ಸಂಸದರಾಗಿದ್ದರು. ಎನ್ ಡಿಎ ಮೈತ್ರಿಕೂಟದಲ್ಲಿದ್ದ ಎಲ್ ಜೆಪಿ ಪಕ್ಷದಿಂದ ಪಾಸ್ವಾನ್ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇಂದು ತಮ್ಮ ತಂದೆ ನಿಧರಾಗಿದ್ದನ್ನು ಪುತ್ರ ಚಿರಾಗ್​ ಅವರು ಟ್ವೀಟ್​ ಮಾಡಿ ತಿಳಿಸಿದ್ದಾರೆ.

Related Articles

Leave a Reply

Your email address will not be published.

Back to top button