ಸುದ್ದಿ

ಖ್ಯಾತ ಚಲನಚಿತ್ರ ನಟಿ ಜಯಂತಿ ಇನ್ನಿಲ್ಲ…

ಬೆಂಗಳೂರು: ಖ್ಯಾತ ಚಲನಚಿತ್ರ ನಟಿ, ಅಭಿನಯ ಶಾರದೆ ಜಯಂತಿ(76 ) ಇಂದು ನಸುಕಿನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಇಂದು ಕೊನೆಯುಸಿರೆಳೆದಿದ್ದಾರೆ.
ಕನ್ನಡದಲ್ಲಿಯೇ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಜಯಂತಿಯವರು ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಸೇರಿದಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.ಕನ್ನಡದ ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ್ದಾರೆ.

1950ರಲ್ಲಿ ಬಳ್ಳಾರಿಯಲ್ಲಿ ಜನಿಸಿದ್ದ ಜಯಂತಿಯವರ ಮೂಲ ಹೆಸರು ಕಮಲಾ ಕುಮಾರಿ. ಚಿತ್ರರಂಗಕ್ಕೆ ಬಂದ ನಂತರ ಜಯಂತಿಯಾದರು. ತಂದೆ ಬಾಲಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರೆ, ತಾಯಿ ಸಂತಾನಲಕ್ಷ್ಮಿ ಗೃಹಿಣಿ.

ಜಯಂತಿಯವರು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ವೈ ಆರ್ ಪುಟ್ಟಸ್ವಾಮಿಯವರ ‘ಜೇನುಗೂಡು’ ಚಿತ್ರದ ಮೂಲಕ.
ಒನಕೆ ಓಬವ್ವನ ಹಾಡಿನಲ್ಲಿ ಜಯಂತಿಯವರ ಅಭಿನಯ ಇಂದಿಗೂ ಜನಪ್ರಿಯ. ನಟಿ ಜಯಂತಿ, 6 ಬಾರಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದರು. 1960 ರಿಂದ 1980ರ ದಶಕದವರೆಗೂ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿದ್ದರು. ಜೇನುಗೂಡು, ಬೆಟ್ಟದ ಹುಲಿ, ಎಡಕಲ್ಲು ಗುಡ್ಡದ ಮೇಲೆ, ಕಸ್ತೂರಿ ನಿವಾಸ ಮೊದಲಾದವು ಅವರ ಪ್ರಮುಖ ಚಿತ್ರಗಳು.

Related Articles

Back to top button