ಸುದ್ದಿ

ಎಸ್ಎಸ್ ಎಲ್ ಸಿ ಪರೀಕ್ಷೆ – ವಿದ್ಯುತ್ ಕಡಿತಗೊಳಿಸದಿರಲು ಮನವಿ…

ಸುಳ್ಯ: ರಾಜ್ಯದಾದ್ಯಂತ ಎಸ್ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತಿದ್ದು, ಸುಳ್ಯ ತಾಲೂಕಿನಲ್ಲಿ ಮಳೆಯ ಕಾರಣ ಸೇರಿದಂತೆ ಯಾವುದೇ ಕಾರಣಕ್ಕೂ ವಿದ್ಯುತ್ ಕಡಿತಗೊಳಿಸಬಾರದೆಂದು ನ.ಪಂ. ಸದಸ್ಯ ರಿಯಾಜ್ ಕಟ್ಟೆಕ್ಕಾರ್ ಮೆಸ್ಕಾಂ ನ ಸಹಾಯಕ ಇಂಜಿನಿಯರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ವಿದ್ಯುತ್ ಕಡಿತಗೊಳಿಸಿದರೆ ಪರೀಕ್ಷೆಗೆ ತಯಾರಿ ಮಾಡುತ್ತಿರುವ ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ವಿದ್ಯುತ್ ಕಡಿತಗೊಳಿಸಬಾರದೆಂದು ರಿಯಾಜ್ ವಿನಂತಿಸಿದ್ದಾರೆ.

Related Articles

Leave a Reply

Your email address will not be published.

Back to top button