ಶನಿವಾರ – ದ.ಕ 420 , ಉಡುಪಿ 57 ಹಾಗೂ ರಾಜ್ಯದಲ್ಲಿ 8811 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಶನಿವಾರ ) ದ.ಕ ಜಿಲ್ಲೆಯಲ್ಲಿ 420 , ಉಡುಪಿ 57 ಹಾಗೂ ರಾಜ್ಯದಲ್ಲಿ 8811 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 420 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 21667 ಕ್ಕೆ ಏರಿಕೆಯಾಗಿದೆ. ಇಂದು 8 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಟ್ಟು 502 ಮಂದಿ ಬಲಿಯಾಗಿದ್ದಾರೆ.ಇಂದು 152 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 5217 ಸಕ್ರಿಯ ಪ್ರಕರಣಗಳಿವೆ.

ಉಡುಪಿ ಜಿಲ್ಲೆಯಲ್ಲಿ ಇಂದು 57 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 16034ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1496 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಇಂದು 8811 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ.ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,66023ಕ್ಕೆ ಏರಿಕೆಯಾಗಿದೆ. ಇಂದು 5,417 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 4,55,719 ಮಂದಿ ಗುಣಮುಖರಾಗಿದ್ದಾರೆ. ಇಂದು 86 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.ರಾಜ್ಯದಲ್ಲಿ 8,503 ಮಂದಿ ಕೊರೋನಾ ಕಾರಣದಿಂದ ಸಾವಿಗೀಡಾಗಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button