ಶನಿವಾರ – ದ.ಕ 30, ಉಡುಪಿ 14 , ರಾಜ್ಯದಲ್ಲಿ 308 ಕೊರೊನಾ ಪಾಸಿಟಿವ್…

ಮಂಗಳೂರು : ಇಂದು (ಶನಿವಾರ) ದ.ಕ ಜಿಲ್ಲೆಯಲ್ಲಿ 30 , ಉಡುಪಿ ಜಿಲ್ಲೆಯಲ್ಲಿ 14 ಹಾಗೂ ರಾಜ್ಯದಲ್ಲಿ 308 ಕೊರೊನಾ ಪಾಸಿಟಿವ್‌‌ ಪ್ರಕರಣ ಪತ್ತೆಯಾಗಿದೆ.
ದ.ಕ. ಜಿಲ್ಲೆಯಲ್ಲಿ ಇಂದು 4 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ 139 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ 14 ಪಾಸಿಟಿವ್ ಪ್ರಕರಣಗಳಲ್ಲಿ ಎಲ್ಲರೂ ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದಾರೆ. ಈ ನಡುವೆ ಇಂದು 110 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನು ಕರ್ನಾಟಕದಲ್ಲಿ ಇಂದು 308 ಪ್ರಕರಣ ಪತ್ತೆಯಾಗಿದೆ. 3 ಮಂದಿ ಮಹಾಮಾರಿಗೆ ಬಲಿಯಾಗಿದ್ದು ಸಾವಿನ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 6,824ಕ್ಕೆ ಏರಿಕೆಯಾಗಿದೆ.

ಕಲಬುರಗಿಯಲ್ಲಿ 67, ಯಾದಗಿರಿಯಲ್ಲಿ 52, ಬೀದರ್ ನಲ್ಲಿ 42, ಬೆಂಗಳೂರು 31, ದಕ್ಷಿಣ ಕನ್ನಡದಲ್ಲಿ 30, ಧಾರವಾಡದಲ್ಲಿ 20, ಉಡುಪಿಯಲ್ಲಿ 14, ಹಾಸನದಲ್ಲಿ, ಬಳ್ಳಾರಿಯಲ್ಲಿ ತಲಾ 11, ವಿಜಯಪುರದಲ್ಲಿ 6, ರಾಯಚೂರು, ಉತ್ತರ ಕನ್ನಡದಲ್ಲಿ ತಲಾ 5, ಕೋಲಾರದಲ್ಲಿ 4, ದಾವಣಗೆರೆಯಲ್ಲಿ 3, ಮಂಡ್ಯ, ಹಾವೇರಿಯಲ್ಲಿ 2, ಮೈಸೂರು,ಬಾಗಲಕೋಟೆ, ರಾಮನಗರದಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ 6,824 ಪ್ರಕರಣಗಳ ಪೈಕಿ 3,648 ಮಂದಿ ಗುಣಮುಖರಾಗಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button