ಶನಿವಾರ – ದ.ಕ 377 , ಉಡುಪಿ 175 ಹಾಗೂ ರಾಜ್ಯದಲ್ಲಿ 9746 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಶನಿವಾರ ) ದ.ಕ ಜಿಲ್ಲೆಯಲ್ಲಿ 377 , ಉಡುಪಿ 175 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 377 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14600 ಕ್ಕೆ ಏರಿಕೆಯಾಗಿದೆ.ಇಂದು 9 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 400 ಕ್ಕೆ ಏರಿಕೆಯಾಗಿದೆ. ಇಂದು 311 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2961 ಸಕ್ರಿಯ ಪ್ರಕರಣಗಳಿವೆ. 377 ಪ್ರಕರಣಗಳ ಪೈಕಿ 192 ಪ್ರಕರಣಗಳು ಮಂಗಳೂರಿನಿಂದ, 45 ಪ್ರಕರಣಗಳು ಬಂಟ್ವಾಳದಿಂದ, 64 ಪ್ರಕರಣಗಳು ಪುತ್ತೂರಿನಿಂದ, 37 ಪ್ರಕರಣಗಳು ಸುಳ್ಯದಿಂದ , 20 ಪ್ರಕರಣಗಳು ಬೆಳ್ತಂಗಡಿಯಿಂದ ಹಾಗೂ 19 ಪ್ರಕರಣಗಳು ಬೇರೆ ಜಿಲ್ಲೆಯವರದ್ದಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 175 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 12511ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1906 ಸಕ್ರಿಯ ಪ್ರಕರಣಗಳಿವೆ.
ಇನ್ನು ರಾಜ್ಯದಲ್ಲಿ ಇಂದು 9,746 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,89,232ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 128 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6298ಕ್ಕೆ ಏರಿಕೆಯಾಗಿದೆ. ಇಂದು 9102 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 2,83,298ಕ್ಕೆ ಏರಿಕೆಯಾಗಿದೆ. 99,617 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 769 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button