ಶನಿವಾರ – ದ.ಕ 432 , ಉಡುಪಿ 215 ಹಾಗೂ ರಾಜ್ಯದಲ್ಲಿ 8364 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಶನಿವಾರ ) ದ.ಕ ಜಿಲ್ಲೆಯಲ್ಲಿ 432 , ಉಡುಪಿ 215 ಹಾಗೂ ರಾಜ್ಯದಲ್ಲಿ 8364 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 432 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19754 ಕ್ಕೆ ಏರಿಕೆಯಾಗಿದೆ. ಇಂದು 5 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಟ್ಟು 477 ಮಂದಿ ಬಲಿಯಾಗಿದ್ದಾರೆ.ಇಂದು 404 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 4529 ಸಕ್ರಿಯ ಪ್ರಕರಣಗಳಿವೆ. 432 ಪ್ರಕರಣಗಳ ಪೈಕಿ 194 ಪ್ರಕರಣಗಳು ಮಂಗಳೂರಿನಿಂದ, 68 ಪ್ರಕರಣಗಳು ಬಂಟ್ವಾಳದಿಂದ, 71 ಪ್ರಕರಣಗಳು ಪುತ್ತೂರಿನಿಂದ, 13 ಪ್ರಕರಣಗಳು ಸುಳ್ಯದಿಂದ , 47 ಪ್ರಕರಣಗಳು ಬೆಳ್ತಂಗಡಿಯಿಂದ ಹಾಗೂ 39 ಪ್ರಕರಣಗಳು ಬೇರೆ ಜಿಲ್ಲೆಯವರದ್ದಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 215 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 15098ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1337 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಇಂದು 8364 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,11,346ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 114 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7922ಕ್ಕೆ ಏರಿಕೆಯಾಗಿದೆ.ಇಂದು 10815 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 4,04841ಕ್ಕೆ ಏರಿಕೆಯಾಗಿದೆ. 98,564 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 822 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button