ಸೆ. 21ರಿಂದ ಶಾಲೆಗಳು ಓಪನ್ ??? ಆದರೆ ತರಗತಿ ಪ್ರಾರಂಭವಿಲ್ಲ !!!…..
ಬೆಂಗಳೂರು: ಸೆ. 21 ರಿಂದ ಶಾಲೆಗಳು ತೆರೆಯುತ್ತವೆ ಆದರೆ ತರಗತಿಗಳು ಸದ್ಯ ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸೆ. 21ರಿಂದ ಕೇವಲ ಶಾಲೆಗಳು ತೆರೆಯಲಿವೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ. ಸೆ.30ರೊಳಗೆ 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕು ಎಂದು ಹೇಳಿದ ಅವರು, ಖಾಸಗಿ ಶಾಲೆಗಳು ಕೇವಲ ಒಂದು ಅವಧಿಯ ಶುಲ್ಕವನ್ನು ಮಾತ್ರ ಪೋಷಕರಿಂದ ಪಡೆಯಬೇಕು. ಆಗೊಮ್ಮೆ ಸಮಸ್ಯೆಯಾದರೆ ಡಿಡಿಪಿಐ, ಬಿಇಓ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ, ಅವರಿಗೆ ಈಗಾಗಳೆ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ. ಯಾವುದೇ ಪೋಷಕರಿಗೆ ಇದರಿಂದ ಸಮಸ್ಯೆಯಾದರೆ ಕೂಡಲೇ ಬಿಇಓ ಅವರನ್ನು ಸಂಪರ್ಕಿಸಿ ಎಂದರು.
ರಾಜ್ಯದಲ್ಲಿ . ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿ ಮಾಡುತ್ತಿದ್ದಾರೆ. ಎಷ್ಟೇ ಮಕ್ಕಳು ಬಂದರೂ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇವೆ. ಖಾಸಗಿ ಶಾಲೆಯಿಂದ ಟಿಸಿ ಕೊಡದಿದ್ದರೆ, ಬಿಇಓಯಿಂದ ಕೊಡಿಸುವ ವ್ಯವಸ್ಥೆ ಮಾಡುತ್ತೇವೆ ಎಂದೂ ಸಚಿವರು ಹೇಳಿದ್ದಾರೆ.
ತರಗತಿಗಳನ್ನು ಆರಂಭಿಸುವ ಕುರಿತು ಇಲಾಖೆ ಇನ್ನೂ ಯಾವುದೇ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಈ ತಿಂಗಳಾಂತ್ಯದ ನಂತರ ಈ ಕುರಿತು ನಿರ್ಧಾರ ಪ್ರಕಟಿಸಬಹುದು. ಹಂತಹಂತವಾಗಿ ಪರಿಸ್ಥಿತಿ ನೋಡಿಕೊಂಡು ಕ್ರಮ ತೆಗೆದುಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.