ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದ.ಕ ದ್ವಿತೀಯ…

ಬೆಂಗಳೂರು: ಈ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಉಡುಪಿ ಈ ಬಾರಿಯೂ ಪ್ರಥಮ ಸ್ಥಾನ (90.71%) ಪಡೆದಿದ್ದು, ದಕ್ಷಿಣ ಕನ್ನಡ ದ್ವಿತೀಯ(90.71%) ಸ್ಥಾನ ಮತ್ತು ಕೊಡಗು ಜಿಲ್ಲೆ ಮೂರನೇ ಸ್ಥಾನ (81.53%) ಪಡೆದಿದೆ.
ಈ ವರ್ಷ 6,75,277 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 3,84,947 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಇದರಲ್ಲಿ 5,56,267 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆದಿದ್ದು ಶೇಕಡವಾರು ಫಲಿತಾಂಶ 69.20ರಷ್ಟಿದೆ.
ಉಡುಪಿ ಈ ಬಾರಿಯೂ ಪ್ರಥಮ ಸ್ಥಾನ (90.71%) ಪಡೆದಿದ್ದು, ದಕ್ಷಿಣ ಕನ್ನಡ ದ್ವಿತೀಯ(90.71%) ಸ್ಥಾನ ಮತ್ತು ಕೊಡಗು ಜಿಲ್ಲೆ ಮೂರನೇ ಸ್ಥಾನ (81.53%) ಪಡೆದಿದೆ. ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರ ಕೊನೆಯ ಮೂರು ಸ್ಥಾನಗಳಲ್ಲಿದೆ. ಕಳೆದ ವರ್ಷದ ಫಲಿತಾಂಶದ ಲೆಕ್ಕಾಚಾರದಲ್ಲಿ ಉಡುಪಿ ಈ ವರ್ಷ ಪ್ರಥಮ, ದ.ಕ ದ್ವಿತೀಯ ಎಂದು ಇಲಾಖೆ ಘೋಷಿಸಿದೆ.
ಒಟ್ಟಾರೆಯಾಗಿ ವಿಜ್ಞಾನ ವಿಭಾಗದಲ್ಲಿ-ಶೇ.76.2, ಕಲಾ ವಿಭಾಗದಲ್ಲಿ ಶೇ. 41.27, ವಾಣಿಜ್ಯ ವಿಭಾಗದಲ್ಲಿ ಶೇ. 65.52 ಫಲಿತಾಂಶ ಬಂದಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button