ಸುದ್ದಿ

ಗ್ರಾಮ ಪಂಚಾಯತ್ ಚುನಾವಣೆ- ತರಬೇತಿ ಕಾರ್ಯಾಗಾರದ ಬಳಿಕ ಅಭ್ಯರ್ಥಿಗಳ ಆಯ್ಕೆ – ಐವನ್ ಡಿಸೋಜ…

ಸುಳ್ಯ: ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವವರಿಗೆ ತರಬೇತಿ ಕಾರ್ಯ ಹಮ್ಮಿಕೊಂಡು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕಾರ್ಯ ಮಾಡಲಿದ್ದೇವೆ ಎಂದು ಕಾಂಗ್ರೆಸ್ ಉಸ್ತುವಾರಿ ಐವನ್ ಡಿಸೋಜ ಹೇಳಿದ್ದಾರೆ.

ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆಗೆ ಸುಳ್ಯಕ್ಕೆ ಆಗಮಿಸಿದ ಸುಳ್ಯ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಉಸ್ತುವಾರಿ ಐವನ್ ಡಿಸೋಜ ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂಶುದ್ಧೀನ್ ಅವರ ಮನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಯಪ್ರಕಾಶ್ ರೈ, ಸಂಶುದ್ಧೀನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಕೆಪಿಸಿಸಿ ಉಸ್ತುವಾರಿ ನಂದಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷರಾದ ರಾಜರಾಮ್ ಬೆಟ್ಟ, ಧರ್ಮಪಾಲ ಕ್ಯೊಂಗಾಜೆ, ಸದಾಶಿವ ಶೆಟ್ಟಿ ಸುರತ್ಕಲ್, ಮುಸ್ತಫ ಉಪಸ್ಥಿತರಿದ್ದರು.

Related Articles

Leave a Reply

Your email address will not be published.

Back to top button