ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ…

ಪುತ್ತೂರು: ಎಳವೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ವಿವಿಧ ತಾಂತ್ರಿಕ ಮತ್ತು ವೈಜ್ಞಾನಿಕ ವಿಷಯಗಳಲ್ಲಿ ಆಸಕ್ತಿಯನ್ನು ಮೂಡಿಸಿ ಅವರನ್ನು ಶೈಕ್ಷಣಿಕವಾಗಿ ಮತ್ತು ವೈಯಕ್ತಿಕವಾಗಿ ಆ ಕ್ಷೇತ್ರಗಳಿಗೆ ಆಕರ್ಷಿಸುವಂತೆ ಮಾಡುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿತ್ತು.
ಮೈಕ್ರೋಸಾಫ್ಟ್ ಆಫೀಸ್‍ನ ಬಗ್ಗೆ ವಿದ್ಯಾರ್ಥಿಗಳಲ್ಲಿ ಪ್ರಾವೀಣ್ಯತೆಯನ್ನು ಹೆಚ್ಚಿಸುವುದು, ಎಚ್‍ಟಿಎಂಎಲ್ ಬಳಸಿಕೊಂಡು ವೆಬ್ ಪೇಜ್‍ಗಳ ವಿನ್ಯಾಸ, ಗೂಗಲ್ ಸೈಟ್‍ಗಳಲ್ಲಿ ವಿವಿಧ ವೆಬ್‍ಸೈಟ್‍ಗಳನ್ನು ನಿರ್ಮಿಸುವ ಬಗ್ಗೆ ಮಾರ್ಗದರ್ಶನ, ವಿಜ್ಞಾನ, ತಂತಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ವಿಷಯಗಳಲ್ಲಿನ ಹೊಸತನಗಳನ್ನು ತಿಳಿದುಕೊಳ್ಳುವುದು ಮುಂತಾದವುಗಳ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿಯನ್ನು ನೀಡಲಾಯಿತು. ನುರಿತ ಸಂಪನ್ಮೂಲ ವ್ಯಕ್ತಿಗಳು ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೂಕ್ತ ಮಾರ್ಗದರ್ಶನವನ್ನು ನೀಡಿದರು. ಮಾಹಿತಿಯ ಜತೆಗೆ ಅದಕ್ಕೆ ಪೂರಕವಾದ ಪ್ರಾಯೋಗಿಕ ತರಬೇತಿಯನ್ನು ನೀಡಲಾಯಿತು. ನಿರ್ಧಿಷ್ಟ ಗುರಿಗಳ ಕಡೆಗೆ ವಿದ್ಯಾರ್ಥಿಗಳನ್ನು ಕೇಂದ್ರೀಕರಿಸುವ ವಿವಿಧ ಚಟುವಟಿಕೆಗಳನ್ನು ಇಲ್ಲಿ ನಡೆಸಲಾಗಿತ್ತು.
ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್(ರಿ) ಪುತ್ತೂರು ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಇದರ ಸಹಯೋಗದಲ್ಲಿ 14 ದಿನಗಳ ಕಾಲ ನಡೆದ ಈ ಶಿಬಿರದಲ್ಲಿ 28 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

 

 

Sponsors

Related Articles

Back to top button