ಸುದ್ದಿ

ವೃದ್ಧ ತಾಯಿ ಮೇಲೆ ಅಮಾನುಷ ಹಲ್ಲೆ -ಮಗ ಮತ್ತು ಮೊಮ್ಮಗನ ಬಂಧನ…

ಬೆಳ್ತಂಗಡಿ: ತಾಲೂಕಿನ ಸವಣಾಲು ಗ್ರಾಮದ ಹಲಸಿನಕಟ್ಟೆ ಎಂಬಲ್ಲಿ ವೃದ್ಧೆ ಅಪ್ಪಿ ಶೆಟ್ಟಿ ಎಂಬವರಿಗೆ ಅವರ ಮಗ ಮತ್ತು ಮೊಮ್ಮಗ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಹಲ್ಲೆ ನಡೆಸಿದ ಮಗ ಶ್ರೀನಿವಾಸ ಶೆಟ್ಟಿ, ಮೊಮ್ಮಗ ಪ್ರದೀಪ್ ಶೆಟ್ಟಿ‌ ಯನ್ನು ಬೆಳ್ತಂಗಡಿ ಪೋಲೀಸರು ಬಂಧಿಸಿದ್ದಾರೆ.
ವೃದ್ಧೆಯನ್ನು ಆರೈಕೆಗಾಗಿ ಹಿರಿಯ ನಾಗರಿಕ ಪಾಲನಾ ಕೇಂದ್ರಕ್ಕೆ ಸೇರಿಸಲಾಗಿದೆ. ಆರೋಪಿಗಳ ವಿರುದ್ಧ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ‌ ಹಾಗೂ ಹಲ್ಲೆ ಪ್ರಕರಣ ದಾಖಲಿಸಲಾಗಿದೆ.

Related Articles

Leave a Reply

Your email address will not be published.

Back to top button