ಸಜೀಪನಡು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಭೇಟಿ…

ಬಂಟ್ವಾಳ: ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಸಜೀಪನಡು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಯನ್ನು ವೀಕ್ಷಿಸಿದರು.
ಮುಖ್ಯಮಂತ್ರಿಗಳ ಮೂಲಕ ಸರಕಾರದಿಂದ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ಅವರು ಈ ಸಂದರ್ಭದಲ್ಲಿ ಹೇಳಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳು0ಜ ವೆಂಕಟೇಶ್ವರ ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಆಳ್ವ, ಪ್ರವೀಣ್ ಭಂಡಾರಿ,ಸುರೇಶ್ ಬಂಗೇರ,ನಿತಿನ್ ಅರಸ,ಕಿಶನ್ ಶೇಣವ ,ಭಾಸ್ಕರ, ಗಣಪತಿ ಭಟ್ ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button