ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ – ಅಷ್ಠಬಂಧ ಬ್ರಹ್ಮಕಲಶೋತ್ಸವ…

ಬಂಟ್ವಾಳ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ ಸಜೀಪಮುನ್ನೂರು ಇದರ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಬ್ರಹ್ಮಶ್ರೀ ನೀಲೇಶ್ವರ ಕೆ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಗಣಹೋಮ, ತತ್ವ ಹೋಮ, ತತ್ವ ಕಲಶ ಪೂಜೆ, ತತ್ವ ಕಲಶ ಅಭಿಷೇಕ, ಪರಿ ಕಲಶ ಅಭಿಷೇಕ, ಬ್ರಹ್ಮಕಲಶಾಭಿಷೇಕ, ಆಗಮೊಕ್ತವಾಗಿ ಶ್ರದ್ಧಾಭಕ್ತಿಯಿಂದ ವಿದ್ಯುಕ್ತವಾಗಿ ಜರುಗಿತು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶಂ ನಾ ಅಡಿಗ ಕುಂಬಳೆ ಇವರಿಂದ ಭಕ್ತ ಪ್ರಹ್ಲಾದ ಹರಿಕಥಾ ಕಾಲಕ್ಷೇಪ, ಯಕ್ಷ ಸಂಜೀವಿನಿ ಮುಡಿಪು ಇವರಿಂದ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ, ಕುಮಾರಿ ಮೇಘಶ್ರೀ ಮತ್ತು ತಂಡದವರಿಂದ ಭರತನಾಟ್ಯ, ಕೆಯ್ಯೂರು ನಾರಾಯಣ ಭಟ್ ಇವರಿಂದ ಧಾರ್ಮಿಕ ಪ್ರವಚನ ಹಾಗೂ ವಿವಿಧ ಸಂತ ಮಂಡಳಿಗಳ ಭಜನಾ ಕಾರ್ಯಕ್ರಮ, ವಿಠ್ಠಲ ನಾಯಕ ಕಲ್ಲಡ್ಕ ಇವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಿತು.
ಸಮಾರೋಪ ಸಮಾರಂಭದ ಧರ್ಮಸಭೆಯ ಅಧ್ಯಕ್ಷತೆಯನ್ನು ಎಂ ಮಹಾಬಲ ಕೊಟ್ಟಾರಿ ವಹಿಸಿದ್ದರು. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ದೀಪ ಬೆಳಗಿದರು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಗಿರಿಪ್ರಕಾಶ ತಂತ್ರಿ, ನಂದಾವರ ಕ್ಷೇತ್ರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅರವಿಂದ ಭಟ್ ಆಲಾಡಿ ಸಜೀಪನಡು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೆಂಕಟೇಶ್ವರಭಟ್, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಎಂ ಕೃಷ್ಣ ಶಾಮ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಸಜಿಪ ಮಾಗಣೆ ತoತ್ರಿ ಎಂ ಸುಬ್ರಹ್ಮಣ್ಯ ಭಟ್, ಸ್ವಾಗತ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಜಿಲ್ಲಾ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ನೇತ್ರಾವತಿ ಬಳಗ ಮಂಜಲ್ ಪಾದೆ ಇದರ ಅಧ್ಯಕ್ಷ ರಾಕೇಶ, ಚರಣ್ ಜುಮಾದಿ ಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು. ವಸಂತ ಪೆರಾಜೆ ಕಾರ್ಯಕ್ರಮ ನಿರೂಪಿಸಿದರು.

Sponsors

Related Articles

Back to top button