ಸುದ್ದಿ

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ – ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ…

ಬಂಟ್ವಾಳ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ ಸಜೀಪಮುನ್ನೂರು ಇದರ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ ಅ. 17 ರಂದು ದೇವಳದ ಸಭಾಂಗಣದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ ಕೃಷ್ಣ ಶಾಮ್ ಅಧ್ಯಕ್ಷತೆಯಲ್ಲಿ ಜರಗಿತು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಸ್ವಾಗತ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿ ತಾಯ, ಉದ್ಯಮಿ ಎಂ ಮಹಾಬಲ ಕೊಟ್ಟಾರಿ ,ವ್ಯವಸ್ಥಾಪನ ಸಮಿತಿ ಸದಸ್ಯರು , ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು, ಸ್ವಾಗತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಬ್ರಹ್ಮಕಲಶದ ನಾಲ್ಕು ದಿನಗಳಲ್ಲಿ ಬೆಳಿಗ್ಗೆ ಸಾಯಂಕಾಲ ಉಪಹಾರ, ಮಧ್ಯಾಹ್ನ ರಾತ್ರಿ ಅನ್ನದಾನ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಗ್ರಾಮದ ಪ್ರತಿ ಮನೆಯವರು ಮನೆಗೊಂದು ಕಲಶ, ದೇವರ ಸೇವಾ ಪ್ರಸಾದ ಪಡೆದುಕೊಳ್ಳುವಂತೆ ಗ್ರಾಮಸ್ಥರನ್ನು ವಿನಂತಿಸಲಾಯಿತು. ಗೀತೇಶ್ ಗಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Back to top button