ಆದಿತ್ಯವಾರ – ದ.ಕ 34 ಹಾಗೂ ರಾಜ್ಯದಲ್ಲಿ 1565 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಆದಿತ್ಯವಾರ ) ದ.ಕ ಜಿಲ್ಲೆಯಲ್ಲಿ 34 ಹಾಗೂ ರಾಜ್ಯದಲ್ಲಿ 1565 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ 34 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31259 ಕ್ಕೆ ಏರಿಕೆಯಾಗಿದೆ. ಇಂದು ಇಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೋನಾ ಸೋಂಕಿಗೆ ಒಟ್ಟು 694 ಮಂದಿ ಬಲಿಯಾಗಿದ್ದಾರೆ.ಇಂದು 86 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1565 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 8,61,647ಕ್ಕೆ ಏರಿಕೆಯಾಗಿದೆ. ಇನ್ನು ಇಂದು 21 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಈ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 11,529ಕ್ಕೆ ಏರಿಕೆಯಾಗಿದೆ. ಇಂದು 2,363 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 27,146.

Sponsors

Related Articles

Leave a Reply

Your email address will not be published. Required fields are marked *

Back to top button