ಶ್ರೀನಿವಾಸ್ ಯುನಿವರ್ಸಿಟಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಎಂಜಿನಿಯರ್ಸ್ ಡೇ ಆಚರಣೆ…

ಮಂಗಳೂರು: ಮುಕ್ಕದಲ್ಲಿರುವ ಶ್ರೀನಿವಾಸ್ ಯುನಿವರ್ಸಿಟಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರ್ಸ್ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿ ಲಯನ್ ಡಿಸ್ಟ್ರಿಕ್ಟ್ 317ಸಿ ಗವರ್ನರ್ ನೀಲಕಂಠ ಎಂ. ಹೆಗಡೆ ಉದ್ಘಾಟಿಸಿ ಮಾತನಾಡಿ, ಸಮಾಜ ಮತ್ತು ದೇಶವನ್ನು ಕಟ್ಟುವಲ್ಲಿ ಇಂಜಿನಿಯರ್ ವೃತ್ತಿಪರರ ಕೊಡುಗೆ ಅಪಾರ. ಸೃಜನಶೀಲತೆ, ಆವಿಷ್ಕಾರ ಹಾಗೂ ವಿಜ್ಞಾನದ ಸರಿಯಾದ ಅಳವಡಿಕೆಯಿಂದ ಯಾವುದೇ ಸಮಸ್ಯೆಗಳಿಗೆ ತಾಂತ್ರಿಕ ವೃತ್ತಿಪರರು ಪರಿಹಾರವನ್ನು ಕೊಂಡುಕೊಳ್ಳಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ನೀಲಕಂಠ ಎಂ. ಹೆಗಡೆ ಅವರನ್ನು ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು.ಖ್ಯಾತ ಹಿನ್ನಲೆ ಗಾಯಕರಾದ ಪದ್ಮಭೂಷಣ ಡಾ. ಎಸ್. ಪಿ. ಬಾಲಸುಬ್ರಮಣ್ಯಂ ರವರಿಗೆ ಗೌರವ ಸೂಚಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಡಾ. ಥಾಮಸ್ ಪಿಂಟೋ ಮಾತನಾಡಿ, ಸತ್ಕಾರ-ಸಂಸಾರ-ಸಂಸ್ಕಾರ, ಈ ಮೂರೂ ತತ್ವಗಳು ನಮ್ಮ ಜೀವನದಲ್ಲಿ ಅತೀ ಮುಖ್ಯ. ಸರ್ ಎಂ. ವಿಶ್ವೇಶ್ವರಯ್ಯ ರವರ ತತ್ವ-ಸಿದ್ಧಾಂತಗಳು ಎಂದೆಂದಿಗೂ ಇಂಜಿನಿಯರಿಂಗ್ ವೃತ್ತಿಪರರಿಗೆ ಆದರ್ಶಪ್ರಾಯವಾಗಿರುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಅನಿಲ್ ಕುಮಾರ್ ಮಾತನಾಡಿ, ಮಾನವ ಕುಲ ಹಾಗೂ ದೇಶದ ಆರ್ಥಿಕ ಪ್ರಗತಿಯಲ್ಲಿ ಇಂಜಿನಿಯರಿಂಗ್ ವೃತ್ತಿಪರರ ಸೇವೆ ಮತ್ತು ಕೊಡುಗೆ ಮಹತ್ತರವಾದದ್ದು. ಹೊಸ ವಿಧಾನಗಳನ್ನು ರಚಿಸುವುದು ಹಾಗೂ ತಂತ್ರಜ್ಞಾನದ ಮೂಲಕ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕುವುದು ಇಂಜಿನಿಯರಿಂಗ್ ವೃತ್ತಿಪರರ ಮುಂದೆ ಇರುವ ಸವಾಲು. ಕಡಿಮೆ ವೆಚ್ಚದಲ್ಲಿ ಸೇವೆ-ಸೌಲಭ್ಯಗಳು ಸಮಾಜದ ಎಲ್ಲರಿಗೂ ಸಿಗುವಂತಾಗಲು ವಿವಿಧ ಇಂಜಿನಿಯರಿಂಗ್ ಕ್ಷೇತ್ರಗಳ ವೃತ್ತಿಪರರು ಶ್ರಮಿಸಬೇಕು ಎಂದರು.
ಕಾರ್ಯಕ್ರಮದ ಸಂಚಾಲಕ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ರಾಮಕೃಷ್ಣ ಹೆಗಡೆ ಪ್ರಾಸ್ತಾವಿಕ ಭಾಷಣ ಮಾಡಿ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರು ಸಮಾಜಕ್ಕೆ ಹಾಗೂ ದೇಶಕ್ಕೆ ನೀಡಿದ ಕೊಡುಗೆಯನ್ನು ವಿವರಿಸಿದರು.
ಪ್ರೊ. ರಾಜೇಶ್ವರಿ ಪ್ರಾರ್ಥನೆ ಮಾಡಿದರು. ಸೃಷ್ಠಿಕ ಸಂಯೋಜಕ ಪ್ರೊ. ಪ್ರಸನ್ನ ಪಿ. ರಾವ್ ಸ್ವಾಗತಿಸಿದರು. ಪ್ರೊ. ಕೆ. ಶ್ರೀನಾಥ್ ರಾವ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು.
ಪ್ರೊ. ಭವಾನಿ ಶಂಕರ್ ವಂದಿಸಿದರು.ಪ್ರೊ. ಎಸ್. ಶಿಲ್ಪಾ ಕಾರ್ಯಕ್ರಮ ನಿರೂಪಿಸಿದರು.

ಶ್ರೀನಿವಾಸ್ ವಿಶ್ವವಿದ್ಯಾಲಯದ ಪರೀಕ್ಷಾ ನಿಯಂತ್ರಕರಾದ ಡಾ. ಪಿ. ಕೆ. ಸುರೇಶ್ ಕುಮಾರ್, ಶ್ರೀನಿವಾಸ್ ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ನಿರ್ದೇಶಕರಾದ ಡಾ. ಪ್ರವೀಣ್ ಬಿ.ಎಂ., ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಪ್ರಕಾಶ್ ಬಿ., ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button