ಎಸ್. ಎನ್. ಮನ್ಮಥ ಸೇರಿದಂತೆ ನಾಲ್ವರು ಬಿಜೆಪಿಯಿಂದ ವಜಾ…

ಸುಳ್ಯ: ಬಿಜೆಪಿ ಹಿರಿಯ ನಾಯಕ, ಜಿ.ಪಂ. ಸದಸ್ಯ ಎಸ್. ಎನ್. ಮನ್ಮಥ ಸೇರಿದಂತೆ ನಾಲ್ವರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯ ಹಾಗೂ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ 6 ವರ್ಷಗಳ ಕಾಲ ವಜಾಗೊಳಿಸಲಾಗಿದೆ.
ಜಿ.ಪಂ. ಸದಸ್ಯ ಎಸ್. ಎನ್. ಮನ್ಮಥ, ನೆಲ್ಲೂರು ಕೆಮ್ರಾಜೆ ಸೊಸೈಟಿ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ಅರಂತೋಡು-ತೊಡಿಕಾನ ಸೊಸೈಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಹಾಗೂ ದೇವಚಳ್ಳ ಗ್ರಾ.ಪಂ. ಸದಸ್ಯ ಶೈಲೇಶ್ ಅಂಬೆಕಲ್ಲು ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಕಾರಣದೊಂದಿಗೆ ಬಿಜೆಪಿಯ ಪ್ರಾಥಮಿಕ ಸದಸ್ಯ ಹಾಗೂ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ 6 ವರ್ಷಗಳ ಕಾಲ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Related Articles

Leave a Reply

Your email address will not be published.

Back to top button