ಆದಿತ್ಯವಾರ – ದ.ಕ 132 ,ಉಡುಪಿ 282 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಆದಿತ್ಯವಾರ) ದ.ಕ ಜಿಲ್ಲೆಯಲ್ಲಿ 132 ,ಉಡುಪಿ ಜಿಲ್ಲೆಯಲ್ಲಿ 282 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಆದಿತ್ಯವಾರ ಹೊಸದಾಗಿ 132 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7207 ಕ್ಕೆ ಏರಿಕೆಯಾಗಿದೆ.ಇಂದು 6 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 220 ಕ್ಕೆ ಏರಿಕೆಯಾಗಿದೆ. ಇಂದು 195 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 3305 ಸಕ್ರಿಯ ಪ್ರಕರಣಗಳಿವೆ.

ಉಡುಪಿ ಜಿಲ್ಲೆಯಲ್ಲಿ ಆದಿತ್ಯವಾರ 282 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6201ಕ್ಕೆ ಏರಿಕೆಯಾಗಿದೆ.ಉಡುಪಿ ತಾಲೂಕಿನ 152, ಕುಂದಾಪುರ ತಾಲೂಕಿನ 86, ಹಾಗೂ ಕಾರ್ಕಳ ತಾಲೂಕಿನ 43 ಮಂದಿಗೆ ಕೊರೊನಾ ದೃಢವಾಗಿದೆ. ಈ ಪೈಕಿ 77 ಮಂದಿಗೆ ಕೊರೊನಾ ಲಕ್ಷಣಗಳು ಪತ್ತೆಯಾಗಿದ್ದು, ಇನ್ನುಳಿದ 205 ಜನರಿಗೆ ಕೊರೊನಾದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ.

Sponsors

Related Articles

Leave a Reply

Your email address will not be published. Required fields are marked *

Back to top button