ಆದಿತ್ಯವಾರ – ದ.ಕ 326 , ಉಡುಪಿ 216 ಹಾಗೂ ರಾಜ್ಯದಲ್ಲಿ 9319 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಆದಿತ್ಯವಾರ) ದ.ಕ ಜಿಲ್ಲೆಯಲ್ಲಿ 326 , ಉಡುಪಿ 216 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 326 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14926 ಕ್ಕೆ ಏರಿಕೆಯಾಗಿದೆ.ಇಂದು 1 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 401 ಕ್ಕೆ ಏರಿಕೆಯಾಗಿದೆ. ಇಂದು 202 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 3084 ಸಕ್ರಿಯ ಪ್ರಕರಣಗಳಿವೆ. 326 ಪ್ರಕರಣಗಳ ಪೈಕಿ 187 ಪ್ರಕರಣಗಳು ಮಂಗಳೂರಿನಿಂದ, 39 ಪ್ರಕರಣಗಳು ಬಂಟ್ವಾಳದಿಂದ, 28 ಪ್ರಕರಣಗಳು ಪುತ್ತೂರಿನಿಂದ, 27 ಪ್ರಕರಣಗಳು ಸುಳ್ಯದಿಂದ , 33 ಪ್ರಕರಣಗಳು ಬೆಳ್ತಂಗಡಿಯಿಂದ ಹಾಗೂ 12 ಪ್ರಕರಣಗಳು ಬೇರೆ ಜಿಲ್ಲೆಯವರದ್ದಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 216 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 12727ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1852 ಸಕ್ರಿಯ ಪ್ರಕರಣಗಳಿವೆ.

ಇನ್ನು ರಾಜ್ಯದಲ್ಲಿ ಇಂದು 9319 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,98,551ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 95 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6,393ಕ್ಕೆ ಏರಿಕೆಯಾಗಿದೆ.ಇಂದು 9,575 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 2,92,873ಕ್ಕೆ ಏರಿಕೆಯಾಗಿದೆ. 99,266 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button