ಸುದ್ದಿ

ವೇಶ್ಯಾವಾಟಿಕೆ ದಂಧೆ – ಇಬ್ಬರ ಬಂಧನ…

ಮಂಗಳೂರು: ನಗರದ ಪಂಪ್ ವೆಲ್ ಬಳಿಯಿರುವ ವಸತಿಗೃಹ ಒಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ದಾಳಿಯ ವೇಳೆ ಮೂವರು ಯುವತಿಯರನ್ನು ರಕ್ಷಿಸಲಾಗಿದೆ.
ಪುತ್ತೂರು ನಿವಾಸಿ ಸಾಗರ್ ಮತ್ತು ಕಡಂದಲೆಯ ಹರೀಶ್ ಶೆಟ್ಟಿ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಕದ್ರಿ ಠಾಣೆ ಪೊಲೀಸರು ಹಾಗೂ ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಸಾಗರ್ ದಲ್ಲಾಳಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಹರೀಶ್ ಶೆಟ್ಟಿ ವಸತಿಗೃಹ ಸಿಬ್ಬಂದಿಯಾಗಿದ್ದ. ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಹೇಳಲಾಗಿದೆ.

Related Articles

Leave a Reply

Your email address will not be published.

Back to top button