ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ…

ಸುಳ್ಯ: ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನವನ್ನು ಸೆ. 5 ರಂದು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು 10 ನೇ ತರಗತಿಯ ವಿದ್ಯಾರ್ಥಿಗಳು ಆಯೋಜಿಸಿದ್ದರು. ಬೆಳಿಗ್ಗೆ 11 ಗಂಟೆಗೆ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮುಖ್ಯ ಶಿಕ್ಷಕರಾದ ಸಂಪತ್ ಜೆ ಡಿ ಅವರು ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಸರ್ವೆಪಲ್ಲಿ ರಾಧಾಕೃಷ್ಣನ್ ಕುರಿತು ಸಂಕ್ಷಿಪ್ತ ಭಾಷಣ ಮಾಡಿ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ವಿವರಿಸಿದರು. 10 ನೇ ತರಗತಿ ವಿದ್ಯಾರ್ಥಿನಿ ಜುನೈಹ ಭಾಷಣ ಮಾಡುವ ಮೂಲಕ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದರು. ವಿದ್ಯಾರ್ಥಿಗಳು ಶಿಕ್ಷಕರಿಗೆ ಮನರಂಜನೆಗಾಗಿ ಕೆಲವು ಮೋಜಿನ ಆಟಗಳನ್ನು ಸಹ ಏರ್ಪಡಿಸಿದರು.

ಎಲ್ಲಾ ಶಿಕ್ಷಕರು ಕಾರ್ಯಕ್ರಮವನ್ನು ಆನಂದಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾದ ತಾಜ್ ಮಹಮ್ಮದ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿನಕರ ಸಣ್ಣಮನೆ, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 10 ನೇ ತರಗತಿ ವಿದ್ಯಾರ್ಥಿನಿ ಬಿಶಾರ ಸ್ವಾಗತಿಸಿ, ಮಿಸ್ರಿಯ ವಂದಿಸಿದರು. ಶಾಲಾ ನಾಯಕಿ ಆಯಿಷಾ ಕಾರ್ಯಕ್ರಮ ನಿರೂಪಿಸಿದರು.

whatsapp image 2023 09 05 at 11.24.12 am
whatsapp image 2023 09 05 at 11.24.37 am
Sponsors

Related Articles

Back to top button