ಗುರುವಾರ – ದ.ಕ 218 ,ಉಡುಪಿ 160 ಹಾಗೂ ರಾಜ್ಯದಲ್ಲಿ 5030 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಗುರುವಾರ) ದ.ಕ ಜಿಲ್ಲೆಯಲ್ಲಿ 218 ,ಉಡುಪಿ ಜಿಲ್ಲೆಯಲ್ಲಿ 160 ಹಾಗೂ ರಾಜ್ಯದಲ್ಲಿ 5030 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು 218 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4214 ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಇಂದು ಒಟ್ಟು 160 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2846ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೂ 1841 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 994 ಸಕ್ರಿಯ ಪ್ರಕರಣಗಳು ಬಾಕಿ ಇವೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2207 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 5030 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 80,863ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 47 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 97 ಮಂದಿ ಸಾವನ್ನಪ್ಪಿದ್ದಾರೆ

Sponsors

Related Articles

Leave a Reply

Your email address will not be published. Required fields are marked *

Back to top button