ಸುದ್ದಿ

ಗುರುವಾರ – ದ. ಕ. 238 ,ಉಡುಪಿ 109 ಹಾಗೂ ರಾಜ್ಯದಲ್ಲಿ 4169 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಗುರುವಾರ) ದ. ಕ. ಜಿಲ್ಲೆಯಲ್ಲಿ 238 ,ಉಡುಪಿ ಜಿಲ್ಲೆಯಲ್ಲಿ 109 ಹಾಗೂ ರಾಜ್ಯದಲ್ಲಿ 4169 ಕೊರೊನ ಪಾಸಿಟಿವ್ ಪತ್ತೆಯಾಗಿದೆ.
ದ. ಕ. ಜಿಲ್ಲೆಯಲ್ಲಿ 6 ಮಂದಿಯಲ್ಲಿ ILI , 17 ಮಂದಿಯಲ್ಲಿ SARI ಪ್ರಕರಣ, ಪ್ರಾಥಮಿಕ ಸಂಪರ್ಕದಿಂದ 23 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ವಿದೇಶದಿಂದ ಬಂದ 19 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 73 ಮಂದಿಯ ಸೋಂಕಿನ ಮೂಲ ಪತ್ತೆಯಾಗಿಲ್ಲ.
ಉಡುಪಿ ಜಿಲ್ಲೆಯಲ್ಲಿ ಇಂದು 109 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.ಆ ಮೂಲಕ ಸೋಂಕಿತರ ಸಂಖ್ಯೆ 1895ಕ್ಕೆ ಏರಿಕೆಯಾಗಿದೆ. 80 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಇನ್ನು ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2344 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 4169 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 51,422ಕ್ಕೇರಿಕೆಯಾಗಿದೆ.ಇಂದು ರಾಜ್ಯದಲ್ಲಿ 104 ಮಂದಿ ಕೊರೊನ ಸೋಂಕಿಗೆ ಬಲಿಯಾಗಿದ್ದಾರೆ.

Related Articles

Leave a Reply

Your email address will not be published.

Back to top button