ಗುರುವಾರ – ದ.ಕ 246 , ಉಡುಪಿ 402 ಹಾಗೂ ರಾಜ್ಯದಲ್ಲಿ 6706 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು( ಗುರುವಾರ) ದ.ಕ ಜಿಲ್ಲೆಯಲ್ಲಿ 246 , ಉಡುಪಿ 402 ಹಾಗೂ ರಾಜ್ಯದಲ್ಲಿ 6706 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 246 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8071 ಕ್ಕೆ ಏರಿಕೆಯಾಗಿದೆ.ಇಂದು 6 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 250 ಕ್ಕೆ ಏರಿಕೆಯಾಗಿದೆ. ಇಂದು 641 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 1948 ಸಕ್ರಿಯ ಪ್ರಕರಣಗಳಿವೆ.
ಉಡುಪಿಜಿಲ್ಲೆಯಲ್ಲಿ ಗುರುವಾರ 402 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7174 ಕ್ಕೆ ಏರಿಕೆಯಾಗಿದೆ. ಇಂದು 290 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 4138 ಜನ ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 6,706 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,03,200ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 103 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 3,613ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಇಂದು 8,609 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 2,03,200 ಕೊರೋನಾ ಪ್ರಕರಣಗಳ ಪೈಕಿ 1,21,242 ಮಂದಿ ಡಿಸ್ಚಾರ್ಜ್ ಆಗಿದ್ದು ಇನ್ನು 78,336 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button