ಸುದ್ದಿ

ಗುರುವಾರ – ದ.ಕ 297 , ಉಡುಪಿ 209 ಹಾಗೂ ರಾಜ್ಯದಲ್ಲಿ 9386 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಗುರುವಾರ) ದ.ಕ ಜಿಲ್ಲೆಯಲ್ಲಿ 297 , ಉಡುಪಿ 209 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 297 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11389 ಕ್ಕೆ ಏರಿಕೆಯಾಗಿದೆ.ಇಂದು 7 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 337 ಕ್ಕೆ ಏರಿಕೆಯಾಗಿದೆ. ಇಂದು 257 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2372 ಸಕ್ರಿಯ ಪ್ರಕರಣಗಳಿವೆ. 297 ಪ್ರಕರಣಗಳ ಪೈಕಿ 160 ಪ್ರಕರಣಗಳು ಮಂಗಳೂರಿನಿಂದ, 39 ಪ್ರಕರಣಗಳು ಬಂಟ್ವಾಳದಿಂದ, 14 ಪ್ರಕರಣಗಳು ಪುತ್ತೂರಿನಿಂದ, 42 ಪ್ರಕರಣಗಳು ಸುಳ್ಯದಿಂದ , 21 ಪ್ರಕರಣಗಳು ಬೆಳ್ತಂಗಡಿಯಿಂದ ಹಾಗೂ 24 ಪ್ರಕರಣಗಳು ಬೇರೆ ಜಿಲ್ಲೆಯವರದ್ದಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 209 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 10913ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2623 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಇಂದು 9386 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,09,792ಕ್ಕೇರಿಕೆಯಾಗಿದೆ. ಇಂದು 7,866 ಮಂದಿ ಡಿಸ್ಚಾರ್ಜ್ ಆಗಿದ್ದು 2,19,554 ಮಂದಿ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಇನ್ನು 84,987 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒಂದೇ ದಿನ ರಾಜ್ಯದಲ್ಲಿ 141 ಮಂದಿ ಕೊರೋನ ಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,232ಕ್ಕೆ ಏರಿಕೆಯಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ ಇಂದು 219 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

Related Articles

Leave a Reply

Your email address will not be published.

Back to top button