ಗುರುವಾರ – ದ.ಕ 316 , ಉಡುಪಿ 226 ಹಾಗೂ ರಾಜ್ಯದಲ್ಲಿ 8865 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಗುರುವಾರ ) ದ.ಕ ಜಿಲ್ಲೆಯಲ್ಲಿ 316 , ಉಡುಪಿ 226 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 316 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13795 ಕ್ಕೆ ಏರಿಕೆಯಾಗಿದೆ.ಇಂದು 3 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 384 ಕ್ಕೆ ಏರಿಕೆಯಾಗಿದೆ. ಇಂದು 208 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2705 ಸಕ್ರಿಯ ಪ್ರಕರಣಗಳಿವೆ. 316 ಪ್ರಕರಣಗಳ ಪೈಕಿ 190 ಪ್ರಕರಣಗಳು ಮಂಗಳೂರಿನಿಂದ, 40 ಪ್ರಕರಣಗಳು ಬಂಟ್ವಾಳದಿಂದ, 21 ಪ್ರಕರಣಗಳು ಪುತ್ತೂರಿನಿಂದ, 16 ಪ್ರಕರಣಗಳು ಸುಳ್ಯದಿಂದ , 16 ಪ್ರಕರಣಗಳು ಬೆಳ್ತಂಗಡಿಯಿಂದ ಹಾಗೂ 33 ಪ್ರಕರಣಗಳು ಬೇರೆ ಜಿಲ್ಲೆಯವರದ್ದಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 226 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 12143ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2115 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಇಂದು 8865 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,70, 206ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಇಂದು 104 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6054ಕ್ಕೆ ಏರಿಕೆಯಾಗಿದೆ.
ಇಂದು 7122 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 2,68,035ಕ್ಕೆ ಏರಿಕೆಯಾಗಿದೆ. 96,098 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 735 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button