ಸುದ್ದಿ

ಕರ್ನಾಟಕ ಮುಸ್ಲಿಂ ಯೂತ್ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎಂ ಶಾಹೀದ್ ತೆಕ್ಕಿಲ್ ಆಯ್ಕೆ…

ಬೆಂಗಳೂರು: ಕೆ.ಪಿ.ಸಿ.ಸಿ.ಯ ಕಾರ್ಯಧ್ಯಕ್ಷ ಹಾಗೂ ಕರ್ನಾಟಕ ವಿಧಾನ ಪರಿಷತ್ ನ ಸದಸ್ಯರಾಗಿರುವ ಸಲೀಂ ಅಹಮ್ಮದ್ ರವರು ಅಧ್ಯಕ್ಷರಾಗಿರುವ ಮುಸ್ಲಿಂ ಯೂತ್ ಕೌನ್ಸಿಲ್ ಕರ್ನಾಟಕ ಇದರ 6 ಪ್ರಧಾನ ಕಾರ್ಯದರ್ಶಿಯಲ್ಲಿ ಒಬ್ಬರಾಗಿ ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವ್ರದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಾಹೀದ್ ತೆಕ್ಕಿಲ್ ಆಯ್ಕೆಯಾಗಿರುತ್ತಾರೆ. ಸಮಿತಿಯಲ್ಲಿ 25 ಮಂದಿ ಸದಸ್ಯರುಗಳಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಟಿ.ಎಂ ಶಾಹೀದ್ ಆಯ್ಕೆಯಾಗಿರುತ್ತಾರೆ.
ಟಿ.ಎಂ ಶಾಹೀದ್ ತೆಕ್ಕಿಲ್ ಸುಳ್ಯ ತಾಲೂಕು ಎನ್.ಎಸ್.ಯು.ಐ ನ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಎನ್ ಎಸ್ ಯು ಐ ಪ್ರಧಾನ ಕಾರ್ಯದರ್ಶಿಯಾಗಿ, ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ರಾಜ್ಯ ಎಸ್ ಯು ಐ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಯುವ ಕಾಂಗ್ರೇಸ್ ನ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಹಾಗೂ ಹಾವೇರಿ ಜಿಲ್ಲೆಯ ಹಿರೆಕೆರೂರು ಮತ್ತು ಕೊಡಗು ಜೆಲ್ಲೆಯ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ.ಯ ಉಸ್ತುವಾರಿಯಾಗಿ ಸೇವೆ ಸಲ್ಲಿಸಿರುತ್ತಾರೆ . ಕೆಪಿಸಿಸಿ ಯ ಕೊಡಗು ಜಿಲ್ಲಾ ಸದಸ್ಯ ನೋಂದಣಿಯ ಉಸ್ತುವಾರಿಯಾಗಿದ್ದರು. ಸದಸ್ಯತ್ವ ನೋಂದಣಿ ಯಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಮತ್ತು ದ.ಕ ಜಿಲ್ಲೆಯಲ್ಲಿ ಗರಿಷ್ಠ ಸದಸ್ಯರನ್ನ ನೋಂದಾಯಿಸಿದ್ದು ಪಕ್ಷದ ಸಾಂಸ್ಥಿಕ ಚುನಾವಣೆಯ ಮಲಪ್ಪುರಂ ಜಿಲ್ಲೆಯ ಚುನಾವಣಾಧಿಕಾರಿಯಾಗಿದ್ದಾರೆ. 2001ರಲ್ಲಿ ರಾಜ್ಯ ಯುವ ಪ್ರಶಸ್ತಿಗೆ ಪಡೆದ ಇವರು ಸುಳ್ಯ ಅಲ್ಪಸಂಖ್ಯಾತರ ಸಹಕಾರಿ ಸಂಘದಲ್ಲಿ ಮೂರು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.
ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ನಾರುಮಂಡಳಿ ಸದ್ಯರಾಗಿ, ರಾಜ್ಯದ ರಾಜೀವ್ ಯೂತ್ ಪೌಂಡೇಶನ್ ನ ಅಧ್ಯಕ್ಷರಾಗಿ,ಪ್ರಸ್ತುತ ಅಖಿಲ ಭಾರತ ಬ್ಯಾರಿ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಯಾಗಿ,ತೆಕ್ಕಿಲ್ ಗ್ರಾಮೀಣಾಭಿವ್ರದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾಗಿ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ತೆಕ್ಕಿಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಹಲವಾರು ಸಾಮಾಜಿಕ, ರಾಜಕೀಯ, ಧಾರ್ಮಿಕ, ಕ್ರೀಡಾ,ಹಾಗೂ ಸಹಕಾರಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಇವರು ಪ್ರತಿಷ್ಠಿತ ತೆಕ್ಕಿಲ್ ಮನೆತನದವರು.

Related Articles

Back to top button