ಸುದ್ದಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಂಪೂರ್ಣ ವಿಫಲ -ಗೃಹ ಸಚಿವರ ರಾಜೀನಾಮೆಗೆ ಟಿ.ಎಂ.ಶಹೀದ್ ತೆಕ್ಕಿಲ್ ಒತ್ತಾಯ…

ಸುಳ್ಯ: ಬೆಂಗಳೂರಿನಲ್ಲಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ರವರ ಹತ್ಯೆ ಯೂ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಯವರು ಕೂಡಲೇ ರಾಜೀನಾಮೆ ನೀಡಬೇಕೆಂದು ಕೆಪಿಸಿಸಿ ಮುಖಂಡರಾದ ಟಿ.ಎಂ.ಶಹೀದ್ ತೆಕ್ಕಿಲ್ ರವರು ಆಗ್ರಹಿಸಿದ್ದಾರೆ.
ಮಾತ್ರವಲ್ಲದೆ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಸ್ವಪಕ್ಷೀಯರ ಕಿತ್ತಾಟದಿಂದಾಗಿ ರಾಜ್ಯದ ಆಡಳಿತ ಸಂಪೂರ್ಣ ಕುಸಿದಿದೆ. ಕೋವಿಡ್ ಮಹಮಾರಿ, ಆರ್ಥಿಕವಾಗಿ ಸಂಕಷ್ಟಕ್ಕೊಳಗಾದ ಜನತೆ, ಉದ್ಯೋಗವನ್ನು ಕಳೆದುಕೊಂಡ ಯುವ ಜನಾಂಗ, ವಿದ್ಯಾರ್ಥಿ ವೇತನದಿಂದ ವಂಚಿತರಾದ ವಿದ್ಯಾರ್ಥಿಗಳು ಮುಂತಾದ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ ರಾಜ್ಯ ಸಚಿವರ ಕಿತ್ತಾಟ , ಆಡಳಿತ ಪಕ್ಷದಲ್ಲಿ ಆಂತರಿಕ ಭಿನ್ನಮತ, ಐ ಪಿ ಎಸ್ ಮತ್ತು ಐ ಎ ಎಸ್ ಅಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ಮತ್ತು ಪತ್ರಿಕೆಯಲ್ಲಿ ನಿರಂತರವಾಗಿ ಪರಸ್ಪರ ಸಹೋದ್ಯೋಗಿಗಳನ್ನು ಟೀಕಿಸುವ ಘಟನೆಗಳು ನಡೆಯುತ್ತಿದೆ. ಇದನೆಲ್ಲಾ ಹತೋಟಿಗೆ ತರಲು ಮುಖ್ಯಮಂತ್ರಿಗಳು ವಿಫಲವಾಗಿದ್ದಾರೆ. ರಾಜ್ಯ ಸರಕಾರದ ಆಡಳಿತ ಸಂಪೂರ್ಣ ನೆಲ ಕಚ್ಚಿದೆ ಎಂದೂ ಟಿ.ಎಂ ಶಹೀದ್ ತೆಕ್ಕಿಲ್ ರವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related Articles

Back to top button