ಮಂಗಳವಾರ – ದ.ಕ 247 , ಉಡುಪಿ 217 ಹಾಗೂ ರಾಜ್ಯದಲ್ಲಿ 8161 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಮಂಗಳವಾರ) ದ.ಕ ಜಿಲ್ಲೆಯಲ್ಲಿ 247 , ಉಡುಪಿ 217 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 247 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10774 ಕ್ಕೆ ಏರಿಕೆಯಾಗಿದೆ.ಇಂದು 3 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 319 ಕ್ಕೆ ಏರಿಕೆಯಾಗಿದೆ. ಇಂದು 218 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2323 ಸಕ್ರಿಯ ಪ್ರಕರಣಗಳಿವೆ. 247 ಪ್ರಕರಣಗಳ ಪೈಕಿ 171 ಪ್ರಕರಣಗಳು ಮಂಗಳೂರಿನಿಂದ, 48 ಪ್ರಕರಣಗಳು ಬಂಟ್ವಾಳದಿಂದ, 6 ಪ್ರಕರಣಗಳು ಪುತ್ತೂರಿನಿಂದ, 4 ಪ್ರಕರಣಗಳು ಸುಳ್ಯದಿಂದ , 10 ಪ್ರಕರಣಗಳು ಬೆಳ್ತಂಗಡಿಯಿಂದ ಹಾಗೂ 8 ಪ್ರಕರಣಗಳು ಬೇರೆ ಜಿಲ್ಲೆಯವರದ್ದಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 217 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 10446ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2625 ಸಕ್ರಿಯ ಪ್ರಕರಣಗಳಿವೆ. ಕೊರೊನಾ ಸೋಂಕಿನಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 8161 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,91,826ಕ್ಕೇರಿಕೆಯಾಗಿದೆ. ಇನ್ನು 2,91,826 ಪ್ರಕರಣಗಳ ಪೈಕಿ 2,04,439 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ಧಾರೆ. 82,410 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ 61 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 148 ಮಂದಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ 4,958ಕ್ಕೆ ಏರಿಕೆಯಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button