ಮಂಗಳವಾರ – ದ.ಕ 352 , ಉಡುಪಿ 161 ಹಾಗೂ ರಾಜ್ಯದಲ್ಲಿ 9058 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಮಂಗಳವಾರ) ದ.ಕ ಜಿಲ್ಲೆಯಲ್ಲಿ 352 , ಉಡುಪಿ 161 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 352 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13065 ಕ್ಕೆ ಏರಿಕೆಯಾಗಿದೆ.ಇಂದು 7 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 375 ಕ್ಕೆ ಏರಿಕೆಯಾಗಿದೆ. ಇಂದು 363 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2538 ಸಕ್ರಿಯ ಪ್ರಕರಣಗಳಿವೆ. 352 ಪ್ರಕರಣಗಳ ಪೈಕಿ 165 ಪ್ರಕರಣಗಳು ಮಂಗಳೂರಿನಿಂದ, 87 ಪ್ರಕರಣಗಳು ಬಂಟ್ವಾಳದಿಂದ, 42 ಪ್ರಕರಣಗಳು ಪುತ್ತೂರಿನಿಂದ, 19 ಪ್ರಕರಣಗಳು ಸುಳ್ಯದಿಂದ , 25 ಪ್ರಕರಣಗಳು ಬೆಳ್ತಂಗಡಿಯಿಂದ ಹಾಗೂ 14 ಪ್ರಕರಣಗಳು ಬೇರೆ ಜಿಲ್ಲೆಯವರದ್ದಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 161 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 11757ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2307 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಇಂದು 9058 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,51481ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಇಂದು 135 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5837ಕ್ಕೆ ಏರಿಕೆಯಾಗಿದೆ.

ಇನ್ನು 3,51481 ಪ್ರಕರಣಗಳ ಪೈಕಿ 2,54,626 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ಧಾರೆ.
ಇಂದು 5159 ಮಂದಿ ಡಿಸ್ಚಾರ್ಜ್ ಆಗಿದ್ದು, 90, 999 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ಇಂದು 15 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

Sponsors

Related Articles

Leave a Reply

Your email address will not be published. Required fields are marked *

Back to top button