ಮಂಗಳವಾರ – ದ.ಕ 362 ಹಾಗೂ ರಾಜ್ಯದಲ್ಲಿ ದಾಖಲೆಯ 10453 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಮಂಗಳವಾರ) ದ.ಕ ಜಿಲ್ಲೆಯಲ್ಲಿ 362 ಹಾಗೂ ರಾಜ್ಯದಲ್ಲಿ ದಾಖಲೆಯ 10453 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 362 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 22706 ಕ್ಕೆ ಏರಿಕೆಯಾಗಿದೆ. ಇಂದು 9 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಟ್ಟು 524 ಮಂದಿ ಬಲಿಯಾಗಿದ್ದಾರೆ.ಇಂದು 232 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 5678 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಇಂದು 10453 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು 5,92,911 ಪ್ರಕರಣಗಳು ವರದಿಯಾಗಿದೆ. ಇಂದು ರಾಜ್ಯದಲ್ಲಿ 136 ಮಂದಿ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಬಲಿಯಾದವರ ಸಂಖ್ಯೆ 8,777 . ಇಂದು 6,628 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 4,76,378 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button