ಮಂಗಳವಾರ – ದ.ಕ 374 , ಉಡುಪಿ 247 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಮಂಗಳವಾರ) ದ.ಕ ಜಿಲ್ಲೆಯಲ್ಲಿ 374 , ಉಡುಪಿ 247 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 374 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15452 ಕ್ಕೆ ಏರಿಕೆಯಾಗಿದೆ. ಇಂದು 3 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 412 ಕ್ಕೆ ಏರಿಕೆಯಾಗಿದೆ. ಇಂದು 232 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 3054 ಸಕ್ರಿಯ ಪ್ರಕರಣಗಳಿವೆ. 374 ಪ್ರಕರಣಗಳ ಪೈಕಿ 219 ಪ್ರಕರಣಗಳು ಮಂಗಳೂರಿನಿಂದ, 61 ಪ್ರಕರಣಗಳು ಬಂಟ್ವಾಳದಿಂದ, 36 ಪ್ರಕರಣಗಳು ಪುತ್ತೂರಿನಿಂದ, 6 ಪ್ರಕರಣಗಳು ಸುಳ್ಯದಿಂದ , 32 ಪ್ರಕರಣಗಳು ಬೆಳ್ತಂಗಡಿಯಿಂದ ಹಾಗೂ 20 ಪ್ರಕರಣಗಳು ಬೇರೆ ಜಿಲ್ಲೆಯವರದ್ದಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 247 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 13087ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1844 ಸಕ್ರಿಯ ಪ್ರಕರಣಗಳಿವೆ.

ಕಾಸರಗೋಡು ಜಿಲ್ಲೆಯಲ್ಲಿ ಇಂದು 166 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

Sponsors

Related Articles

Leave a Reply

Your email address will not be published. Required fields are marked *

Back to top button