ಮಂಗಳವಾರ – ದ.ಕ 83 , ಉಡುಪಿ 28 ಹಾಗೂ ರಾಜ್ಯದಲ್ಲಿ 1498 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಮಂಗಳವಾರ) ದ.ಕ. ಜಿಲ್ಲೆಯಲ್ಲಿ 83 , ಉಡುಪಿಯಲ್ಲಿ 28 ಹಾಗೂ ರಾಜ್ಯದಲ್ಲಿ 1498 ಕೊರೊನ ಪಾಸಿಟಿವ್ ಪತ್ತೆಯಾಗಿದೆ.
ದ.ಕ. ಜಿಲ್ಲೆಯ ಪೈಕಿ 48 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ, ಇಬ್ಬರಿಗೆ ದ್ವಿತೀಯ ಸಂಪರ್ಕದಿಂದ ಕೊರೊನಾ ಸೋಂಕು ತಗುಲಿದ್ದರೆ 20 ILI ಹಾಗೂ ಒಂದು SAARI ಪ್ರಕರಣವಾಗಿದೆ. ಇಬ್ಬರು ಚಿಕ್ಕಮಗಳೂರು ಜಿಲ್ಲೆಗೆ ಹೋಗಿ ಬಂದಿರುವವರಾಗಿದ್ದಾರೆ. 3 ಮಂದಿಗೆ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ.ಜಿಲ್ಲೆಯಲ್ಲಿ ಇಂದು ಓರ್ವ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, 99 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಇಂದು 28 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1390 ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಇಂದು 1498 ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 15 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 800 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 1498 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 26,815ಕ್ಕೆ ಏರಿಕೆಯಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button