ಮಂಗಳವಾರ – ದ.ಕ 91 ,ಉಡುಪಿ 72 ಹಾಗೂ ರಾಜ್ಯದಲ್ಲಿ 2496 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಮಂಗಳವಾರ) ದ.ಕ ಜಿಲ್ಲೆಯಲ್ಲಿ 91 ,ಉಡುಪಿ ಜಿಲ್ಲೆಯಲ್ಲಿ 72 ಹಾಗೂ ರಾಜ್ಯದಲ್ಲಿ 2496 ಕೊರೊನ ಪಾಸಿಟಿವ್ ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಪ್ರಾಥಮಿಕ ಸಂಪರ್ಕದಿಂದ 20 ಮಂದಿಯಲ್ಲಿ, 29 ಮಂದಿಯಲ್ಲಿ ILI , 5 ಮಂದಿಯಲ್ಲಿ SARI ಪ್ರಕರಣ, ಅಂತರಾಷ್ಟ್ರೀಯ ಪ್ರಯಾಣದಿಂದ ಮರಳಿದ ನಾಲ್ವರಲ್ಲಿ ಸೋಂಕು ಪತ್ತೆಯಾಗಿದ್ದು, 35 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಉಡುಪಿ ಜಿಲ್ಲೆಯ ಪ್ರಕರಣಗಳ ಪೈಕಿ ಉಡುಪಿಯಲ್ಲಿ 16, ಕುಂದಾಪುರದಲ್ಲಿ 41 ಮಂದಿ, ಹಾಗೂ ಕಾರ್ಕಳದಲ್ಲಿ 15 ಮಂದಿ ಸೇರಿದ್ದಾರೆ.
ಇನ್ನು ರಾಜ್ಯದಲ್ಲಿ ಇಂದು 2496 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 44,077ಕ್ಕೆ ಏರಿಕೆಯಾಗಿದೆ. ರಾಜ್ಯಾದ್ಯಂತ 87 ಮಂದಿ ಸೋಂಕಿತರು ಬಲಿಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 844ಕ್ಕೆ ಏರಿಕೆಯಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button