ಮಂಗಳವಾರ – ದ.ಕ 149,ಉಡುಪಿ 84 ಹಾಗೂ ರಾಜ್ಯದಲ್ಲಿ 3649 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಮಂಗಳವಾರ) ದ.ಕ ಜಿಲ್ಲೆಯಲ್ಲಿ 149 ,ಉಡುಪಿ ಜಿಲ್ಲೆಯಲ್ಲಿ 84 ಹಾಗೂ ರಾಜ್ಯದಲ್ಲಿ 3649 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 149 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3829 ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಇಂದು ಒಟ್ಟು 84 ಮಂದಿಗೆ ಕೊರೊನಾ ಪಾಸಿಟಿವ್ ದೃಢಗೊಂಡಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2405 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 92 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೂ 1472 ಗುಣಮುಖರಾಗಿದ್ದಾರೆ. ಸದ್ಯ 653 ಸಕ್ರಿಯ ಪ್ರಕರಣಗಳು ಇವೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1714 ಹೊಸ ಪ್ರಕರಣಗಳು ವರದಿಯಾಗಿದ್ದು,
ರಾಜ್ಯದಲ್ಲಿ ಒಟ್ಟು 3649 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 71,069ಕ್ಕೇರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1664 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 22 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 61 ಮಂದಿ ಸಾವನ್ನಪ್ಪಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button