ಸುದ್ದಿ

ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ…

ನವದೆಹಲಿ: ಕೊರೋನಾ ಕ್ಕೆ ತುತ್ತಾಗಿದ್ದ ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ(65 ) ಅವರು ಇಂದು ನಿಧನ ಹೊಂದಿದ್ದಾರೆ.

ಬೆಳಗಾವಿಯ ಸಂಸದರಾದ ಸುರೇಶ್ ಅಂಗಡಿ ಅವರು ಕಳೆದ ವಾರ ಕೊರೋನಾ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಂದು ಸಾಯಂಕಾಲ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸುರೇಶ್ ಅಂಗಡಿ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 2004, 2009, 2014 ಮತ್ತು 2019ರಲ್ಲಿ ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ಕಾನೂನು ಪದವಿ ಪಡೆದಿದ್ದ ಅವರು ಬೆಳಗಾವಿಯ ಕೆ ಕೆ ಕೊಪ್ಪ ಗ್ರಾಮದಲ್ಲಿ 1955 ರಲ್ಲಿ ಜನಿಸಿದ್ದರು. ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

Related Articles

Leave a Reply

Your email address will not be published.

Back to top button