ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು – ಇಂಜಿನಿಯರ್ಸ್ ದಿನಾಚರಣೆ…

ಪುತ್ತೂರು: ದಕ್ಷ ಆಡಳಿತದ ತಳಹದಿಯ ಮೇಲೆ ಭವ್ಯ ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸಿದ ವಿಶ್ವವಿಖ್ಯಾತ ಇಂಜಿನಿಯರ್ ಸರ್.ಎಂ.ವಿಶ್ವೇಶ್ವರಯ್ಯನವರು ಭಾರತಕ್ಕೊಂದು ವರದಾನವಾಗಿದ್ದರು ಎಂದು ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ ಹೇಳಿದರು.
ಅವರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ದಿನಾಚರಣೆ ಸಮಾರಂಭದಲ್ಲಿ ಸರ್.ಎಂ.ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಮಾತಾಡಿದರು.
ಭಾರತದ ಇತಿಹಾಸದಲ್ಲೇ ವಿಶ್ವೇಶ್ವರಯ್ಯನವರಿಗೆ ಹೋಲಿಸುವ ಇನ್ನೊಬ್ಬ ವ್ಯಕ್ತಿ ಸಿಗಲಾರರು. ಲಂಚಕೋರತನ, ಲಾಭಕೋರತನದ ಸವಾಲುಗಳನ್ನು ಎದುರಿಸುತ್ತಿರುವ ಇಂದಿನ ಸಮಾಜದಲ್ಲಿ ವಿಶ್ವೇಶ್ವರಯ್ಯನವರ ನಿಸ್ವಾರ್ಥ, ಪ್ರಾಮಾಣಿಕ ದುಡಿಮೆ ನಮಗೆ ದಾರಿದೀಪವಾಗಬಲ್ಲದು ಎಂದು ನುಡಿದರು.
ವಿವಿದ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಸಮಾರಂಭದಲ್ಲಿ ಹಾಜರಿದ್ದರು.
ಕಾರ್ಯಕ್ರಮ ಸಂಯೋಜಕ ಪ್ರೊ..ಹರೀಶ್.ಎಸ್.ಆರ್ ಸ್ವಾಗತಿಸಿ, ವಂದಿಸಿದರು.
ಮೈಕ್ರೋಸಾಫ್ಟ್ ಟೀಂ ಮೂಲಕ ಕಾರ್ಯಕ್ರಮದ ನೇರ ಪ್ರಸಾರವನ್ನು ನಡೆಸಲಾಗಿತ್ತು.

Sponsors

Related Articles

Leave a Reply

Your email address will not be published. Required fields are marked *

Back to top button