ಸುದ್ದಿ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು – ಎಂಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ…

ಪುತ್ತೂರು: ನಮ್ಮ ಬದುಕು ಅರ್ಥಪೂರ್ಣವಾಗುವಂತೆ ಮತ್ತು ನಿರಂತರ ಚಟುವಟಿಕೆಯಿಂದ ಕೂಡಿರುವಂತೆ ಮಾಡಿಕೊಳ್ಳಬೇಕಾದರೆ ಉತ್ತಮ ಅಭ್ಯಾಸಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಅಳವಡಿಸಿಕೊಳ್ಳಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಹಾಗೂ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಜಿ. ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮಾತಾಡಿದರು. ನಿರ್ಧಿಷ್ಟವಾದ ಗುರಿ, ನಿಯಮಬದ್ಧ ಯೋಜನೆ ಮತ್ತು ನಿರಂತರ ಸಾಧನೆ ನಿಮ್ಮನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ. ವಿದ್ಯಾರ್ಥಿಗಳಲ್ಲಿ ಜ್ಞಾನದಾಹವಿರಬೇಕು ಮತ್ತು ಅದನ್ನು ಪಡೆಯುವ ಛಲವಿರಬೇಕು ಎಂದು ಅವರು ಹೇಳಿದರು.
ಇನ್ನೋರ್ವ ಅತಿಥಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್ ಪಿ. ಮಾತನಾಡಿ ಪಠ್ಯದ ಜತೆಗೆ ಪಠ್ಯೇತರ ವಿಷಯಗಳಿಗೂ ಸಮಾನವಾದ ಆದ್ಯತೆಯನ್ನು ನೀಡಬೇಕು, ಉತ್ತಮವಾದ ಹವ್ಯಾಸಗಳು ಗುಣಮಟ್ಟದ ಬದುಕನ್ನು ಬಾಳುವುದಕ್ಕೆ ಸಹಕಾರಿಯಾಗುತ್ತದೆ. ಇದಕ್ಕಾಗಿ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಳ್ಳಿ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ| ಮಹೇಶ್‍ಪ್ರಸನ್ನ ಕೆ. ಮಾತನಾಡಿ ಕಾರ್ಪೊರೇಟ್ ಜಗತ್ತು ಬಯಸುವ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ತರಬೇತು ನೀಡುವುದಕ್ಕಾಗಿ ಕಾಲೇಜು ಅನೇಕ ಚಟುವಟಿಕೆಗಳನ್ನು ಆಯೋಜಿಸುತ್ತದೆ. ಇದರಲ್ಲಿ ಸಕ್ರಿಯವಾಗಿ ಭಾಗವಹಿಸಿ ಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಿ. ಅವಕಾಶಗಳಿಗೆ ಕಾಯದೆ ಸಿಕ್ಕಿದ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಿ ಎಂದರು.
ಎಂಬಿಎ ವಿಭಾಗದ ನಿರ್ದೇಶಕ ಡಾ| ಶೇಖರ್ ಎಸ್ ಅಯ್ಯರ್ ಸ್ವಾಗತಿಸಿ, ನೀತಿ ನಿಯಮಗಳ ಬಗ್ಗೆ ತಿಳಿಸಿದರು. ವಿದ್ಯಾರ್ಥಿನಿ ಹರ್ಷಿತಾ ಶೆಟ್ಟಿ ವಂದಿಸಿದರು. ಶ್ರೀದೇವಿ ಕಾರ್ಯಕ್ರಮ ನಿರ್ವಹಿಸಿದರು.

 

Related Articles

Leave a Reply

Your email address will not be published.

Back to top button